ETV Bharat / sitara

ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಕಂಗನಾ ಮನವಿ: ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ತನ್ನ ಮೇಲಿರುವ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಕಂಗನಾ ರಣಾವತ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದ್ದು, ನಟಿಗೆ ಮುಖಭಂಗವಾಗಿದೆ.

: Bombay High Court dismisses actor Kangana Ranaut's plea

author img

By

Published : Sep 9, 2021, 12:15 PM IST

ಮುಂಬೈ: ತನ್ನ ವಿರುದ್ಧ ಗೀತ ರಚನೆಕಾರ ಜಾವೇದ್ ಅಖ್ತರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಬಾಲಿವುಡ್​ ನಟಿ ಕಂಗನಾ ರಣಾವತ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಪುರಾವೆ ಇಲ್ಲದೇ ಹೇಳಿಕೆ ನೀಡಿ ತಮ್ಮ ಹೆಸರನ್ನು ತಳಕು ಹಾಕಿದಕ್ಕಾಗಿ ಜಾವೇದ್ ಅಖ್ತರ್ ಅವರು ಬಾಲಿವುಡ್​ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈನ ಅಂಧೇರಿಯ 10ನೇ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಈ ಸಂಬಂಧ ಮ್ಯಾಜಿಸ್ಟ್ರೇಟ್ ಕೋರ್ಟ್ ಆರಂಭಿಸಿದ ಸಂಪೂರ್ಣ ವಿಚಾರಣೆಯನ್ನು ರದ್ದುಗೊಳಿಸುವಂತೆ ಕಂಗನಾ ಬಾಂಬೆ ಹೈಕೋರ್ಟ್​ಗೆ ಸರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾ.ರೇವತಿ ಮೊಹಿತೆ ಡೇರೆ ನೇತೃತ್ವದ ನ್ಯಾಯಪೀಠವು ಈ ಅರ್ಜಿಯನ್ನು ವಜಾಗೊಳಿಸಿದ್ದು, ನಟಿಗೆ ಮುಖಭಂಗವಾಗಿದೆ.

ಪ್ರಕರಣದ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಕಳೆದ ಮೇ ತಿಂಗಳಿನಲ್ಲಿ ಅಂಧೇರಿ ಮೆಟ್ರೋಪಾಲಿಟ್ ಮ್ಯಾಜಿಸ್ಟ್ರೇಟ್ ಕೋರ್ಟ್ ಕಂಗನಾಗೆ ಜಾಮೀನು ರಹಿತ ವಾರಂಟ್​ ಜಾರಿಮಾಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.