ಸ್ಯಾಂಡಲ್ವುಡ್ ನಲ್ಲಿ ಸದ್ಯಕ್ಕೆ ಸ್ಟಾರ್ ವಾರ್ ತಾರಕಕ್ಕೆ ಏರುತ್ತಿದೆ. ಒಂದು ಕಡೆ ಸರಣಿ ಟ್ವೀಟ್ ಮತ್ತೊಂದು ಕಡೆ ಡಿ - ಬಾಸ್ ಮತ್ತು ಕಿಚ್ಚ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ವಾರ್ ಮಾಡ್ತಿರೊ ಬೆನ್ನಲ್ಲೇ, ಪೋಲಿಸರು ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾ ವೈರಲ್ ಮಾಡಿದ ಕಿಡಿಗೇಡಿಗಳಿಗೆ ಬಲೆ ಬೀಸಿದ್ದಾರೆ.
ಈ ಹಿಂದೆ ಪೈಲ್ವಾನ್ ಚಿತ್ರದ ನಿರ್ಮಾಪಕಿ ಸ್ವಪ್ನ ಕೃಷ್ಣ , ಸೈಬರ್ ಕ್ರೈಂ ಪೋಲಿಸರಿಗೆ ದೂರು ನೀಡಿದ್ದಾರೆ. ಸಿನಿಮಾ ಬಿಡುಗಡೆಯ ದಿನವೇ ಪೈರಸಿಯಾಗಿದ್ದ ವಿಡಿಯೋಗಳನ್ನು, ಫೇಸ್ ಬುಕ್ ಮತ್ತು ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಿರ್ಮಾಪಕಿ ಸ್ವಪ್ನಕೃಷ್ಣ ನಗರ ಪೊಲೀಸ್ ಆಯುಕ್ತ ಬಾಸ್ಕರ್ ರಾವ್ ಅವರ ಸೂಚನೆ ಮೇರೆಗೆ ಸಿಸಿಬಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿ ವೈರಲ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.