ಕಾಮಿಡಿ ನಟ ಚಿಕ್ಕಣ್ಣ ಹಾಗೂ ಕಿರುತೆರೆ ನಟ ಶಿಶಿರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ 'ಬಿಲ್ಗೇಟ್ಸ್' ಚಿತ್ರದ ಟೀಸರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ವಿಭಿನ್ನ ಪಾತ್ರಗಳಲ್ಲಿ ಕಾಣಿಸುವ ಮೂಲಕ ಪ್ರಯೋಗಕ್ಕೆ ಒಗ್ಗಿಕೊಂಡಿರುವ ಚಿಕ್ಕಣ್ಣ ಈ ಚಿತ್ರದಲ್ಲಿ ಕೂಡಾ ತಮ್ಮ ಎಂದಿನ ಮ್ಯಾನರಿಸಂನಲ್ಲಿ ಅಭಿನಯಿಸಿದ್ದಾರೆ.
- " class="align-text-top noRightClick twitterSection" data="">
ಚಿತ್ರದಲ್ಲಿ ಚಿಕ್ಕಣ್ಣ ಎರಡು ಶೇಡ್ಗಳಲ್ಲಿ ನಟಿಸಿದ್ದು ಯಮನ ಪಾತ್ರವನ್ನು ನಿಭಾಯಿಸಿದ್ದಾರೆ. ಇದು ಇಬ್ಬರು ಹಳ್ಳಿ ಹುಡುಗರ ಕಥೆಯಾಗಿದ್ದು, ಹಳ್ಳಿ ಬಿಟ್ಟು ಬೆಂಗಳೂರಿಗೆ ಬರುವ ಯುವಕರು ಸಿಟಿಗೆ ಹೇಗೆ ಒಗ್ಗಿಕೊಳ್ಳುತ್ತಾರೆ..ಏನೆಲ್ಲಾ ಪಾಡು ಅನುಭವಿಸುತ್ತಾರೆ. ಎಂಬುದು ಚಿತ್ರದ ಕಥೆಯಾಗಿದೆ. ಚಿತ್ರದಲ್ಲಿ ಅಕ್ಷರ ರೆಡ್ಡಿ ಹಾಗೂ ರಶ್ಮಿತಾ ರೋಜ ನಾಯಕಿಯರಾಗಿ ನಟಿಸಿದ್ದಾರೆ. ಶ್ರೀನಿವಾಸ್ ಸಿ. ಮಂಡ್ಯ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು ಶ್ರೀನಿವಾಸ್ ನಿರ್ದೇಶನದ ಮೊದಲ ಸಿನಿಮಾವಾಗಿದೆ.
ಚಿತ್ರದ ಟೀಸರ್ ನೋಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತೋಷ ವ್ಯಕ್ತಪಡಿಸಿದ್ದಾರೆ. ಸಿನಿಮಾ ನೋಡಿ ಬೆಂಬಲಿಸಿ ಎಂದು ಕನ್ನಡಿಗರಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಮುಗಿದಿದ್ದು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿ ಇದೆ. ಶ್ರೀ ಪಾಂಚಜನ್ಯ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿ ಈ ಸಿನಿಮಾಗೆ ಸುಮಾರು ಹನ್ನೊಂದು ಮಂದಿ ಹಣ ಹೂಡಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು ನೊಬಿನ್ ಪೌಲ್ ಸಂಗೀತ ನೀಡಿದ್ದಾರೆ. ಸಂಜಿತ್ ಹೆಗ್ಡೆ ಒಂದು ಹಾಡಿಗೆ ಧ್ವನಿಯಾಗಿದ್ದಾರೆ.