ETV Bharat / sitara

"ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನ ಕರ್ನಾಟಕಕ್ಕೆ ಅಪಾರ ನಷ್ಟ": ಸಿಎಂ ಬೊಮ್ಮಾಯಿ ಸಂತಾಪ - ನಟ ಅಪ್ಪು ನಿಧನ

ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಸಿಎಂ ಬೊಮ್ಮಾಯಿ ಸಂತಾಪ
ಸಿಎಂ ಬೊಮ್ಮಾಯಿ ಸಂತಾಪ
author img

By

Published : Oct 29, 2021, 3:46 PM IST

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದು ವಿಧಿವಶರಾಗಿದ್ದಾರೆ. ಇಂದು ಮುಂಜಾನೆ ಅಪ್ಪು, ಜಿಮ್​ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ, ಲಘು ಹೃದಯಾಘಾತ ಸಂಭವಿಸಿತ್ತು. ವಿಕ್ರಂ ಆಸ್ಪತ್ರೆಗೆ ದಾಖಲಿಸಿತ್ತಾದರೂ, ಪುನೀತ್​ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ನಟ ಪುನೀತ್ ರಾಜ್​ಕುಮಾರ್​ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. "ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್​ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ.

  • ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ. pic.twitter.com/OF0aLhrqPm

    — Basavaraj S Bommai (@BSBommai) October 29, 2021 " class="align-text-top noRightClick twitterSection" data=" ">

ಸಚಿವ ಕೆ.ಎಸ್. ಈಶ್ವರಪ್ಪ ಶೋಕ ಸಂದೇಶ:

ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್​ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ. ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ.

ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಚಿವೆ ಶಶಿಕಲಾ ಜೊಲ್ಲೆ ಸಂತಾಪ:

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಈ ನಾಡು ಕಂಡ ಯಶಸ್ವಿ ನಾಯಕ ನಟ, ಕನ್ನಡಿಗರ ಕಣ್ಮಣಿ, ಯುವ ನಟ ಪುನೀತ್ ರಾಜ್ ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿದೆ ಎಂದು ಮುಜರಾಯಿ, ವಕ್ಫ್ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ದುಃಖ ವ್ಯಕ್ತಪಡಿಸಿದ್ದಾರೆ.

ಪುನೀತ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ದುಃಖವುಂಟಾಗುತ್ತಿದೆ. ಡಾಕ್ಟರ್ ರಾಜಕುಮಾರ್ ಅವರ ಪುತ್ರರಾಗಿದ್ದರೂ ಯಾವುದೇ ಅಹಂ ಇಲ್ಲದೇ ಎಲ್ಲರ ಪ್ರೀತಿಯ ಅಪ್ಪು ಆಗಿ ನಾಡಿಗಷ್ಟೆ ಅಲ್ಲ ವಿಶ್ವದ ಕನ್ನಡಿಗರು ಹಾಗೂ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಈ ದಿನ ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು.

ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ಸಂತಾಪದಲ್ಲಿ ಸೂಚಿಸಿದ್ದಾರೆ.

ನಟ ಪುನೀತ್ ನಿಧನದಿಂದ ಕುಟುಂಬಸ್ಥರು, ಅಸಂಖ್ಯಾತ ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದಾರೆ. ಅಪ್ಪು ನಿಧನ ಸುದ್ದಿ ಕೇಳುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಚಿತ್ರರಂಗದ ಗಣ್ಯರು, ಅಸಂಖ್ಯಾತ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.