'ರಾಬರ್ಟ್' ಸಿನಿಮಾ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ನಟ ದರ್ಶನ್ ಹಾಗೂ ಚಿತ್ರದ ನಿರ್ಮಾಪಕ ಉಮಾಪತಿ ಫಿಲ್ಮ್ ಚೇಂಬರ್ ಕಚೇರಿಗೆ ಆಗಮಿಸಿದ್ದಾರೆ. ವಿವಾದಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್ನಲ್ಲಿ ಚರ್ಚಿಸಿದ್ದಾರೆ.
ತರುಣ್ ಸುಧೀರ್ ನಿರ್ದೇಶನದ 'ರಾಬರ್ಟ್' ಸಿನಿಮಾವನ್ನು ತೆಲುಗು ಭಾಷೆಯಲ್ಲಿ ಬಿಡುಗಡೆ ಮಾಡಲು, ಅಲ್ಲಿನವರು ಬಿಡುತ್ತಿಲ್ಲ ಎಂಬ ವಿಚಾರಕ್ಕೆ, ಸಂಬಂಧಿಸಿದಂತೆ ಮಾತನಾಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ ನಟ ದರ್ಶನ್ ಹಾಗೂ ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ, ಫಿಲ್ಮ್ ಚೇಂಬರ್ ಅಧ್ಯಕ್ಷ ಜಯರಾಜ್, ನಿರ್ಮಾಪಕ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಫಿಲ್ಮ್ ಚೇಂಬರ್ ಉಪಾಧ್ಯಕ್ಷರಾದ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿ ಎನ್. ಎಂ. ಸುರೇಶ್ , ನಿರ್ಮಾಪಕ ಅಣಜಿ ನಾಗರಾಜ್ ಹಾಗೂ ಇನ್ನಿತರೊಂದಿಗೆ ಚರ್ಚಿಸಿ ಈ ವಿವಾದವನ್ನು ಶೀಘ್ರವೇ ಬಗೆಹರಿಸಲು ಮನವಿ ಮಾಡಿದ್ದಾರೆ.