'ಸಾಹೇಬ'ನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಕ್ರೇಜಿಸ್ಟಾರ್ ಪುತ್ರ ಮನುರಂಜನ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸದ್ಯಕ್ಕೆ ಅವರು ಮುಗಿಲು ಪೇಟೆ ಚಿತ್ರದ ಜಪ ಮಾಡುತ್ತಿದ್ದಾರೆ.
ಟ್ರೈಲರ್ ಹಾಗೂ ಹಾಡುಗಳಿಂದಲೇ ಸ್ಯಾಂಡಲ್ವುಡ್ನಲ್ಲಿ ಮಾತಾಗುತ್ತಿರುವ ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಲವ್ ಸ್ಟೋರಿ ಜೊತೆಗೆ ಫ್ಯಾಮಿಲಿ ಸೆಂಟಿಮೆಂಟ್ ಹೊಂದಿರುವ ಮುಗಿಲ್ ಪೇಟೆ ನವೆಂಬರ್ 5ಕ್ಕೆ ಅಂದರೆ, ದೀಪಾವಳಿ ಹಬ್ಬಕ್ಕೆ ಬಿಡುಗಡೆ ಆಗಲಿದೆ.

ಮನರಂಜನ್ ಅವರಿಗೆ ಪಂಜಾಬಿ ಬೆಡಗಿ ಕಯಾದು ಲೋಹರ್ ಜೋಡಿಯಾಗಿದ್ದಾರೆ. ಈಗಾಗಲೇ ಮನುರಂಜನ್ ಹಾಗೂ ಕಯಾದು ಲೋಹರ್ ಕೆಮಿಸ್ಟ್ರಿ ವರ್ಕ್ ಔಟ್ ಆಗಿದೆ. ಇದರ ಜೊತೆಗೆ ರಿಷಿ, ಅವಿನಾಶ್, ತಾರಾ ಅನುರಾಧ, ಸಾಧುಕೋಕಿಲ, ರಂಗಾಯಣ ರಘು ದೊಡ್ಡ ತಾರಾಗಣ ಚಿತ್ರದಲ್ಲಿದೆ. ಈ ಹಿಂದೆ ಅಡಚಣೆಗಾಗಿ ಕ್ಷಮಿಸಿ ಚಿತ್ರವನ್ನು ನಿರ್ದೇಶಿಸಿದ್ದ ಭರತ್ ಎಸ್ ನಾವುಂದ, ರಚನೆ ಜೊತೆಗೆ ನಿರ್ದೇಶನ ಮಾಡಿದ್ದಾರೆ.
ಭರತ್ ಎಸ್ ಅವರಿಗೆ ಇದು ಎರಡನೇ ಚಿತ್ರವಾಗಿದ್ದು ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆರು ಸುಮಧುರ ಹಾಡುಗಳಿರುವ ಈ ಚಿತ್ರಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತ ನೀಡಿದ್ದಾರೆ. ರವಿವರ್ಮ (ಗಂಗು) ಅವರ ಛಾಯಾಗ್ರಹಣ ಮುಗಿಲ್ ಪೇಟೆಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ.
ಅರ್ಜುನ್ ಕಿಟ್ಟು ಸಂಕಲನ, ಡಾ.ರವಿವರ್ಮ ಹಾಗು ವಿಜಯ್ ಸಾಹಸ ನಿರ್ದೇಶನ ಮಾಡಿದ್ದಾರೆ. ಹರ್ಷ, ಮುರಳಿ, ಮೋಹನ್ ನೃತ್ಯ ನಿರ್ದೇಶನ ಹಾಗೂ ಸತೀಶ್ ಅವರ ಕಲಾ ನಿರ್ದೇಶನವಿರುವ ಚಿತ್ರಕ್ಕಿದೆ. ಹನುಮಂತು ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಮೋತಿ ಮೂವೀ ಮೇಕರ್ಸ್ ಲಾಂಛನದಲ್ಲಿ ರಕ್ಷಾ ವಿಜಯ್ ಕುಮಾರ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.