ETV Bharat / sitara

ಜನ್ಮ ಜನ್ಮ ಜತೆಗಿರುವ 'ನಾತಿಚರಾಮಿ' ನೀಡಿ ಅಖಿಲಾ ಜೊತೆ ಸಪ್ತಪದಿ ತುಳಿದ ನಿರ್ದೇಶಕ ಮಂಸೋರೆ.. - ಅಖಿಲಾ ಜೊತೆ ಮದುವೆಯಾದ ನಿರ್ದೇಶಕ ಮಂಸೋರೆ

ರಾಷ್ಟ್ರಪಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಅವರು ಅಖಿಲಾ ಜೊತೆ ಇಂದು ಸಪ್ತಪದಿ ತುಳಿದಿದ್ದಾರೆ. ಸಿನಿ ಪಯಣದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಮಂಸೋರೆ ಸದ್ಯ 'ರಾಣಿ ಅಬ್ಬಕ್ಕ'ನ ಕುರಿತಾದ ಚಿತ್ರ ಮಾಡುವ ಸಿದ್ಧತೆಯಲ್ಲಿದ್ದಾರೆ. ಇದರ ಮಧ್ಯ ವಿವಾಹ ಬಂಧನಕ್ಕೊಳಗಾಗಿದ್ದಾರೆ..

director-mansore-got-marriage
ನಿರ್ದೇಶಕ ಮಂಸೋರೆ
author img

By

Published : Aug 15, 2021, 4:59 PM IST

ಹರಿವು, ನಾತಿಚರಾಮಿ ಮತ್ತು ಆಕ್ಟ್-1978 ಚಿತ್ರಗಳ ನಿರ್ದೇಶಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಂಸೋರೆ, ಅಖಿಲಾ ಎಂಬುವರ ಜೊತೆ ಸಪ್ತಪದಿ ತುಳಿದಿದ್ದಾರೆ. ತಲಘಟ್ಟಪುರ ಹತ್ತಿರದ ಶಿಬ್ರಾವಿ ಕೋರ್ಟ್ ಯಾರ್ಡ್ ರೆಸಾರ್ಟ್ ನಲ್ಲಿ ಬೆಳಗ್ಗೆ 6.30 ಗಂಟೆಯ ಶುಭ ಲಗ್ನದಲ್ಲಿ ಮಂಸೋರೆ ಅಖಿಲಾ ಜೊತೆ ಹಸೆಮಣೆ ಏರಿದ್ದಾರೆ‌. ಕೋವಿಡ್ ಕಾರಣದಿಂದಾಗಿ ಹೆಚ್ಚು ಜನರನ್ನು ಆಹ್ವಾನಿಸದೆ ಕುಟುಂಬದವರು, ಚಿತ್ರರಂಗದವರು ಹಾಗೂ ಸ್ನೇಹಿತರು ಮದುವೆಗೆ ಸಾಕ್ಷಿಯಾಗಿದ್ದಾರೆ.

director mansore got marriage
ಅಖಿಲಾ ಜೊತೆ ಸಪ್ತಪದಿ ತುಳಿದ ನಿರ್ದೇಶಕ ಮಂಸೋರೆ

2014ರಲ್ಲಿ ಮಂಸೋರೆ ಅವರು ಮೊದಲು ನಿರ್ದೇಶಿಸಿದ 'ಹರಿವು' ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಬಂದಿತ್ತು. 'ಹರಿವು' ಚಿತ್ರದಲ್ಲಿ ಸಂಚಾರಿ ವಿಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು.

ಮಂಸೋರೆ ನಿರ್ದೇಶನದಲ್ಲಿ ಶೃತಿ ಹರಿಹರನ್ ಮತ್ತು ಸಂಚಾರಿ ವಿಜಯ್ ನಟಿಸಿ, 2018ರಲ್ಲಿ ಬಿಡುಗಡೆಯಾಗಿದ್ದ 'ನಾತಿಚರಾಮಿ' ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ಎಂಬ ರಾಷ್ಟ್ರಪ್ರಶಸ್ತಿ, ಮಂಸೋರೆ ಅವರಿಗೆ ಉತ್ತಮ ಸಾಹಿತ್ಯಕ್ಕೆ ರಾಷ್ಟ್ರಪ್ರಶಸ್ತಿ ಮತ್ತು ಇತರೆ ಮೂರು ವಿಭಾಗಗಳಲ್ಲಿ ರಾಷ್ಟ್ರಪ್ರಶಸ್ತಿ ಗೌರವ ಸಿಕ್ಕಿದ್ದು, ಅದೇ ಚಿತ್ರದ ನಿರ್ದೇಶನಕ್ಕಾಗಿ ಮಂಸೋರೆ ಅವರಿಗೆ ಉತ್ತಮ ನಿರ್ದೇಶಕ ಫಿಲ್ಮ್ ಫೇರ್ ಪ್ರಶಸ್ತಿಯ ಗರಿ ಸಿಕ್ಕಿತ್ತು.

ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ನೇತೃತ್ವದ 'ಬದಲಾದ ಭಾರತ' ಎಂಬ ಯೋಜನೆಯಡಿಯಲ್ಲಿ ಆಯ್ಕೆಯಾದ ಸಿನಿಮಾಗಳ ಪಟ್ಟಿಯಲ್ಲಿ ನಾತಿಚರಾಮಿ ಚಿತ್ರವೂ ಒಂದಾಗಿತ್ತು. ಮಂಸೋರೆ ನಿರ್ದೇಶನದ ಮೂರನೇ ಚಲನಚಿತ್ರ "ಆಕ್ಟ್-1978" ಕಳೆದ ವರ್ಷ ದೀರ್ಘಕಾಲದ ಲಾಕ್ಡೌನ್ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಮೊದಲ ದಕ್ಷಿಣ ಭಾರತದ ಚಲನಚಿತ್ರ ಎಂದೇ ಖ್ಯಾತಿಯಾಗಿತ್ತು.

ಕೊರೊನಾ ಲಾಕ್-ಡೌನ್ ನಂತರ ಸಿನಿಮಾಗಳನ್ನು ಬಿಡುಗಡೆ ಮಾಡಲು ಚಿತ್ರರಂಗ ಹಿಂದೇಟು ಹಾಕುತ್ತಿದ್ದ ವೇಳೆಯಲ್ಲಿ ಬಿಡುಗಡೆಯಾದ 'ಆಕ್ಟ್-1978' ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಸದ್ಯಕ್ಕೆ ಮಂಸೋರೆ ಅವರು 'ರಾಣಿ ಅಬ್ಬಕ್ಕ'ನ ಕುರಿತಾದ ಚಿತ್ರ ಮಾಡುವ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದು, ಅದರ ಚಿತ್ರೀಕರಣಕ್ಕೆ ಹೋಗುವ ಮುನ್ನ ಮತ್ತೊಂದು ಚಿತ್ರ ಮಾಡುವ ಬಗ್ಗೆ ಮಂಸೋರೆ ತಯಾರಿ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.