ಬೆಂಗಳೂರು: ಲವ್ ಗುರು, ಜೂಮ್, ಆರೆಂಜ್ ಸಿನಿಮಾಗಳ ನಿರ್ದೇಶಕ ಪ್ರಶಾಂತ್ ರಾಜ್ ಅವರಿಗೆ ಕೋವಿಡ್ ಸೋಂಕು ತಗುಲಿದೆ.
ಕಳೆದ ಒಂದು ವಾರದಿಂದ ಪ್ರಶಾಂತ್ ರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ಸಮಸ್ಯೆ ಇರುವುದರಿಂದ ಅವರಿಗೆ ಆಕ್ಸಿಜನ್ ಅಳವಡಿಸಲಾಗಿದೆ. ಕೋವಿಡ್ ವೈರಸ್ ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ಆಸ್ಪತ್ರೆಯಿಂದಲೇ ಪ್ರಶಾಂತ್ ರಾಜ್ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸದ್ಯ, ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆದಷ್ಟು ಬೇಗ ಹುಷಾರಾಗಿ ಬರ್ತೀನಿ ಎಂದು ಅವರು ಹೇಳಿಕೊಂಡಿದ್ದಾರೆ.