ETV Bharat / sitara

KGF 2 ವಾಯ್ಸ್​ ಡಬ್ಬಿಂಗ್​ ಕಂಪ್ಲೀಟ್​.. ಸಂಜಯ್​ ದತ್​​ ಜೊತೆಗಿನ ಫೋಟೋ ಹಂಚಿಕೊಂಡ ಪ್ರಶಾಂತ್ ನೀಲ್

author img

By

Published : Dec 7, 2021, 4:03 PM IST

Updated : Dec 7, 2021, 4:14 PM IST

ಕೆಜಿಎಫ್​-2ನ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್​ ನಟ ಸಂಜಯ್ ​ದತ್ ತಮ್ಮ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ಎಲ್ಲ ಭಾಷೆಗಳ ಡಬ್ಬಿಂಗ್ ಕೆಲಸ ಮುಕ್ತಾಯಗೊಂಡಿದೆ ಎಂದು ಕೆಜಿಎಫ್​​​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

Prashanth Neel photo with Sanjay dutt
ನಟ ಸಂಜಯ್​ ದತ್ ಜೊತೆ ನಿರ್ದೇಶಕ ಪ್ರಶಾಂತ್ ನೀಲ್

ಕನ್ನಡ ಚಿತ್ರರಂಗ ಮಾತ್ರವಲ್ಲದೇ ಇಡೀ ವಿಶ್ವವೇ ಎದುರು ನೋಡುತ್ತಿರುವ ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್ ಚಾಪ್ಟರ್ 2. ಟ್ರೈಲರ್​ನಿಂದಲೇ ಭಾರತೀಯ ಚಿತ್ರರಂಗದಲ್ಲಿ ಧೂಳ್ ಎಬ್ಬಿಸಿರುವ ಕೆಜಿಎಫ್ 2 ಸಿನಿಮಾ, ಮುಂದಿನ ವರ್ಷ ತೆರೆ ಕಾಣೋದಕ್ಕೆ ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಮತ್ತೆ ಬೆಳ್ಳಿ ತೆರೆ ಮೇಲೆ ಅಬ್ಬರಿಸಲು ರೆಡಿಯಾಗಿರೋ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಅಧೀರನ ಪಾತ್ರಕ್ಕೆ ಬಾಲಿವುಡ್​ ನಟ ಬಣ್ಣ ಹಚ್ಚಿದ್ದಾರೆ. ಜೊತೆಗೆ ಎಲ್ಲ ಭಾಷೆಗಳ ಡಬ್ಬಿಂಗ್ ಕಾರ್ಯ ಮುಗಿಸಿದ್ದಾರೆ.

ಹೌದು, ಕೆಜಿಎಫ್​ ಚಾಪ್ಟರ್-2ನಲ್ಲಿ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್​ ನಟ ಸಂಜಯ್​ ದತ್ ತಮ್ಮ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ಎಲ್ಲ ಭಾಷೆಗಳ ಡಬ್ಬಿಂಗ್ ಕೆಲಸ ಮುಕ್ತಾಯಗೊಂಡಿದೆ ಎಂದು ಕೆಜಿಎಫ್​​​ ನಿರ್ದೇಶಕ ಪ್ರಶಾಂತ್ ನೀಲ್​ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಂಜಯ್​ ದತ್​ ಜೊತೆ ಡಬ್ಬಿಂಗ್​ ಸ್ಟುಡಿಯೋದಲ್ಲಿ ನಿಂತಿರುವ ಫೋಟೋ ಹಂಚಿಕೊಳ್ಳುವ ಮೂಲಕ ಡಬ್ಬಿಂಗ್​ ಕಾರ್ಯ ಮುಕ್ತಾಯಗೊಂಡಿದೆ ಎಂದು ನಿರ್ದೇಶಕ ಪ್ರಶಾಂತ್​ ನೀಲ್ ತಿಳಿಸಿದ್ದಾರೆ.

ರಾಕಿಂಗ್ ಸ್ಟಾರ್ ಯಶ್​ರೊಂದಿಗೆ ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯ್ ದತ್​ ಸೇರಿದಂತೆ ದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿ ನಿರ್ಮಾಪಕ ವಿಜಯ್​ ಕಿರಗಂದೂರು ಅದ್ಧೂರಿ ವೆಚ್ಚದಲ್ಲಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ 2022ರ ಏಪ್ರಿಲ್ 14ರಂದು ಕೆಜಿಎಫ್ 2 ಸಿನಿಮಾ ದೇಶಾದ್ಯಂತ ತೆರೆ ಕಾಣುತ್ತಿದೆ.

ಇದನ್ನೂ ಓದಿ: ಕಿಚ್ಚನ ಅಭಿಮಾನಿಗಳಿಗೆ ಸಿಹಿ ಸುದ್ದಿ: ವಿಕ್ರಾಂತ್​ ರೋಣ ಬಿಡುಗಡೆಗೆ ಮುಹೂರ್ತ ಫಿಕ್ಸ್​

ಕೆಜಿಎಫ್ -1 ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂ. ಗಳಿಸುವ ಮೂಲಕ ದಾಖಲೆ ಬರೆದಿತ್ತು. ಕನ್ನಡ ಚಿತ್ರರಂಗ ಮಾತ್ರವಲ್ಲದೇ ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್​ ಸಿನಿಮಾ ಹೊಸ ಅಲೆ ಎಬ್ಬಿಸಿತ್ತು. ಇದೀಗ ಕೆಜಿಎಫ್​ 2 ಏಪ್ರಿಲ್​ 14ಕ್ಕೆ ಬಿಡುಗಡೆಯಾಗುತ್ತಿದ್ದು, ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಕುತೂಹಲವಿದೆ.

Last Updated : Dec 7, 2021, 4:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.