ಕರಾವಳಿಯ ಖಡಕ್ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಹೊಸದೊಂದು ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು, ತಸ್ಮಯ್ ಪ್ರೊಡಕ್ಷನ್ ಬ್ಯಾನರ್ ಅಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ಹೊಸ ನಟ ರಂಜನ್ ಛತ್ರಪತಿ ಮೊದಲ ಬಾರಿಗೆ ನಾಯಕ ನಟನಾಗಿ ಬಣ್ಣ ಹಚ್ಚಲಿದ್ದಾರೆ. ಸಿನಿಮಾದಲ್ಲಿ ಖಡಕ್ ವಿಲನ್ ಮ್ಯಾನರಿಸಂನಿಂದಲೇ ಗುರುತಿಸಿಕೊಂಡಿರುವ ಪ್ರಮೋದ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ಕರಾವಳಿ ಕುವರಿ ಹಾಗೂ ಬಿಗ್ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ಮೊದಲ ಬಾರಿಗೆ ಟ್ರೈಬಲ್ ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಈ ಕುರಿತು ಮಾತುಕತೆ ನಡೆಸಿದ್ದಾರೆ. ಉಳಿದಂತೆ ಚಿತ್ರದಲ್ಲಿ ಸ್ಯಾಂಡಲ್ವುಡ್ನ ಹೆಸರಾಂತ ನಟ-ನಟಿಯರೂ ಬಣ್ಣ ಹಚ್ಚಲಿದ್ದಾರಂತೆ.
ಬೆಳಗಾವಿ ಮೂಲದ ಉದ್ಯಮಿ ಬಾಲಚಂದ್ರ ಇನಾಂದಾರ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಕನ್ನಡ, ತಮಿಳು, ಮರಾಠಿ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಿಗೆ ಸಂದೇಶ್ ಶೆಟ್ಟಿ ಹೆಚ್ಚು ಒತ್ತು ನೀಡಿದ್ದು, ಕೆಲವೇ ದಿನಗಳಲ್ಲಿ ಚಿತ್ರದ ಶೀರ್ಷಿಕೆಯನ್ನು ಅನಾವರಣ ಗೊಳಿಸಲಿದ್ದಾರೆ.
ಚಿತ್ರದ ಬಹುತೇಕ ಚಿತ್ರೀಕರಣವು ಕರಾವಳಿ, ಪಶ್ವಿಮಘಟ್ಟದ ತಪ್ಪಲಿನ ಪ್ರದೇಶ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ನಡೆಯಲಿದೆ. ಉಳಿದಂತೆ ಪಾತ್ರಗಳ ಆಯ್ಕೆಯಲ್ಲಿ ನಿರ್ದೇಶಕ ತೊಡಗಿದ್ದಾರೆ.
ಇದನ್ನೂ ಓದಿ: ಮನೆ ಕೆಲಸದವಳ ಮೇಲೆ ಸ್ಯಾಂಡಲ್ವುಡ್ ಖ್ಯಾತ ನಿರ್ಮಾಪಕರ ಪುತ್ರನಿಂದ ಹಲ್ಲೆ: ಆರೋಪಿಗಳು ಪರಾರಿ