ETV Bharat / sitara

ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾದ ನಿರ್ದೇಶಕ ಶಶಾಂಕ್ - Sandalwood news

'ಮೊಗ್ಗಿನ ಮನಸ್ಸು' ಚಿತ್ರ ನಿರ್ದೇಶಕ ಶಶಾಂಕ್ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಹೊಸ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಈ ಸಿನಿಮಾ ಭಾವುಕ, ಪ್ರೇಮಕಥೆಯ ಕಥೆಯಾಗಿದೆ.

Director Shashank set to make a movie
ನಿರ್ದೇಶಕ ಶಶಾಂಕ್
author img

By

Published : Apr 30, 2021, 6:46 AM IST

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳನ್ನು ನೀಡುವ ಮೊಗ್ಗಿನ ಮನಸ್ಸು ಚಿತ್ರ ನಿರ್ದೇಶಕ ಶಶಾಂಕ್, ಇದೀಗ ಮತ್ತೊಮ್ಮೆ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ.

Director Shashank set to make a movie
ನಿರ್ದೇಶಕ ಶಶಾಂಕ್ ಜತೆ ನಟ ಪ್ರವೀಣ್

ಶಶಾಂಕ್ ಸಿನಿಮಾಸ್ ಸಂಸ್ಥೆಯಡಿ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಚಲನಚಿತ್ರ ನಿರ್ಮಾಣ ಕಾರ್ಯ ನಡೆಯಲಿದೆ. ಈ ಚಿತ್ರದ ಮುಖೇನ, ಪ್ರವೀಣ್ ಎಂಬ ಹೊಸ ಪ್ರತಿಭೆ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

Director Shashank set to make a movie
ನಟ ಪ್ರವೀಣ್​

ವೈದ್ಯಕೀಯ ಪದವೀಧರರಾದ ಪ್ರವೀಣ್, ಹೊಸಪೇಟೆ ಮೂಲದವರಾಗಿದ್ದು, ನಟನಾಗುವ ಆಸಕ್ತಿಯಿಂದ ಅದಕ್ಕೆ ಬೇಕಾಗುವ ಎಲ್ಲಾ ತರಬೇತಿಗಳನ್ನು ಪಡೆದು ಬೆಳ್ಳಿತೆರೆ ಮೇಲೆ ಬರಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು: ನಟ ಸುದೀಪ್

ಈ ಹೊಸ ಚಿತ್ರಕ್ಕೆ ಇನ್ನೂ ಶೀರ್ಷಿಕೆ ನಿಗದಿಯಾಗಿಲ್ಲ. ಭಾವುಕ, ಪ್ರೇಮಕಥೆ ಹೊಂದಿರುವ ಚಿತ್ರಕ್ಕೆ ಶಶಾಂಕ್ ಹೊಸ ನಾಯಕಿಯ ಹುಡುಕಾಟದಲ್ಲಿದ್ದಾರೆ. ಲಾಕ್​ಡೌನ್​ಗೂ ಮುನ್ನ ಸರಳವಾಗಿ ಮುಹೂರ್ತ ನೆರವೇರಿದ್ದು, ಲಾಕ್​ಡೌನ್ ಮುಗಿದ ನಂತರ ಫೋಟೋಶೂಟ್ ಮಾಡಿ, ಶೀರ್ಷಿಕೆಯ ಜೊತೆ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಜೂನ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಲಿದ್ದಾರೆ. ಉಳಿದ ತಾರಾಗಣ ಮತ್ತು ತಾಂತ್ರಿಕ ವರ್ಗದ ಆಯ್ಕೆ ನಡೆಯುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.