ಜನತೆಗೆ ‘ಸಿಂಪಲ್ ಆಗಿ ಒಂದು ಲವ್ ಸ್ಟೋರಿ’ (Simple agi ondu love story) ಹೇಳಿ ಸ್ಯಾಂಡಲ್ವುಡ್ಗೆ (sandalwood) ಬಹುಪರಾಕ್ ಹಾಕಿ ‘ಸಿಂಪಲ್ ಆಗಿ ಇನ್ನೊಂದು ಲವ್ ಸ್ಟೋರಿ’ (Simple agi innondu love story) ಅಂತಾ ‘ಚಮಕ್’ (Chamak) ಕೊಟ್ಟು ಗಾಂಧಿನಗರದ ‘ಬಜಾರ್’ನಲ್ಲಿ (Bazaar) ‘ಸಖತ್’ (Sakath) ಸುದ್ದಿ ಮಾಡ್ತಿದ್ದಾರೆ ನಿರ್ದೇಶಕ ಸಿಂಪಲ್ ಸುನಿ (Director Simple Suni). ಸುನಿ ಸಿನಿಮಾಗಳು ಅಂದ್ರೆ ಚಿತ್ರ ಪ್ರೇಮಿಗಳು ಸಖತ್ ಕ್ಯೂರಿಯಾಸಿಟಿಯಿಂದ ನೋಡ್ತಾರೆ. ಅದಕ್ಕೆ ಕಾರಣ ಸದಾ ಹೊಸತನ, ಹೊಸಬರು ಹಾಗೂ ವಿಶೇಷತೆಗಳಿಂದ ಕೂಡಿರುತ್ತವೆ. ಸ್ಟಾರ್ ಹೀರೋಗಳಿಗೆ ಆ್ಯಕ್ಷನ್ ಕಟ್ ಹೇಳಿ ಸಕ್ಸಸ್ ಕಂಡಿರುವ ಸಿಂಪಲ್ ಸುನಿ ಈಗ ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ.
ಅರೇ.. ಸಿಂಪಲ್ ಸುನಿ (Simple Suni) ಕೋರ್ಟ್ ಕಟಕಟೆಯಲ್ಲಿ (Court witness stand box) ನಿಂತಿರುವುದಕ್ಕೆ ಕಾರಣವೇನು? ಅನ್ನೋ ಪ್ರಶ್ನೆ ಎಲ್ಲರ ಮನಸ್ಸಿನಲ್ಲಿ ಕಾಡೋದಕ್ಕೆ ಶುರುವಾಗುತ್ತೆ. ಅದಕ್ಕೆ ಉತ್ತರ ಸಖತ್ ಚಿತ್ರದ ಪ್ರಮೋಷನ್. ಹೌದು.. ಸಿಂಪಲ್ ಸುನಿ (Simple Suni) ಮತ್ತು ಗೋಲ್ಡನ್ ಸ್ಟಾರ್ ಗಣೇಶ್ (Golden star Ganesh) ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ಚಿತ್ರ ಸಖತ್. ಈ ಜೋಡಿ ಜೊತೆಯಾಗಿ ಪ್ರೇಕ್ಷಕರಿಗೆ ‘ಸಖತ್’ ಕಾಮಿಡಿ (Comedy) ಹೂರಣ ಬಡಿಸಲು ಸಜ್ಜಾಗಿದ್ದಾರೆ. ಸಖತ್ ಸಿನಿಮಾ ಮೂಲಕ ಸಿನಿಪ್ರೇಕ್ಷಕ ಕುಲವನ್ನು ನಗುವಿನ ಅಲೆಯಲ್ಲಿ ತೇಲಿಸಲಿದ್ದಾರೆ.
ಈಗಾಗ್ಲೇ ರಿಲೀಸ್ ಆಗಿರುವ ಸಖತ್ ಸಿನಿಮಾದ ಮೋಷನ್ ಪೋಸ್ಟರ್ (Sakath movie motion poster), ಟೀಸರ್ ಹಾಗೂ ಸಾಂಗ್ ಕುತೂಹಲದ ಚಿಟ್ಟಿಯಾಗಿವೆ. ಈ ನಡುವೆ ಸಖತ್ ಸಿನಿಮಾ ಬಳಗ ಪ್ರಮೋಷನ್ಗೆ (pramotion) ಐಡಿಯಾವೊಂದನ್ನು ಮಾಡಿದೆ. ಪ್ರತಿ ಮಾಲ್ಗಳಲ್ಲಿ ಕೋರ್ಟ್ ಕಟಕಟೆ (Court witness stand box in mall) ನಿರ್ಮಿಸಿದ್ದಾರೆ.
ಅಷ್ಟಕ್ಕೂ ಸಖತ್ ಸಿನಿಮಾಕ್ಕೂ ಕೋರ್ಟ್ ಕಟಕಟೆಗೂ (Court witness stand box) ಏನು ಸಂಬಂಧ ಅಂದ್ರೆ ಈ ಚಿತ್ರದ ಟೀಸರ್ನಲ್ಲಿ ಕೋರ್ಟ್ ಸೀನ್ ಇದೆ. ಗಣೇಶ್ ಕೋರ್ಟ್ ಕಟಕಟೆಯಲ್ಲಿ (Court witness stand box) ನಿಂತು ನಟಿಸಿರುವ ಒಂದು ದೃಶ್ಯವಿದೆ. ಅಲ್ಲದೇ ಸಖತ್ ಸಿನಿಮಾ (Sakath movie) ಕೋರ್ಟ್ ಸುತ್ತ ನಡೆಯುವ ಕಥೆ. ಹೀಗಾಗಿ ಚಿತ್ರತಂಡ ಪ್ರಮೋಷನ್ಗೆ ಈ ವಿಧಾನ ಬಳಸಿದೆ. ಮಾಲ್ ಅಂಗಳದಲ್ಲಿ ಕೋರ್ಟ್ ಕಟಕಟೆ ನಿರ್ಮಿಸಿದೆ ಸಖತ್ ಸಿನಿಮಾ ತಂಡ. ಈ ಕಟಕಟೆಯಲ್ಲಿ ನಿಂತು ಮಕ್ಕಳು, ಪ್ರತಿಯೊಬ್ಬರು ಫೋಟೋಗೆ ಫೋಸ್ ಕೊಡ್ತಿದ್ದಾರೆ. ನವೆಂಬರ್ 14 ರಂದು (November 14th) ಸಖತ್ ಸಿನಿಮಾದ ಟೈಟಲ್ ಸಾಂಗ್ ರಿಲೀಸ್ ಆಗ್ತಿದೆ.
ಕಾಮಿಡಿ ಜೊತೆ ರಿಯಾಲಿಟಿ ಸುತ್ತ ಹೆಣೆಯಲಾಗಿರುವ ಸಖತ್ ಸಿನಿಮಾದಲ್ಲಿ (Sakath movie) ಗಣೇಶ್ಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು (Nishvika Naidu) ಹಾಗೂ ಸುರಭಿ (Surabhi) ನಟಿಸಿದ್ದಾರೆ. ಉಳಿದಂತೆ ರಂಗಾಯಣ ರಘು (Rangayana Raghu), ಸಾಧು ಕೋಕಿಲ (Sadhu Kokila), ಧರ್ಮಣ್ಣ ಕಡೂರು ಸೇರಿದಂತೆ ಮುಂತಾದವರು ಪೋಷಕ ಪಾತ್ರ ನಿಭಾಯಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ (KVN production) ನಡಿ ಅದ್ಧೂರಿಯಾಗಿ ತಯಾರಾಗಿರುವ ಸಖತ್ ಸಿನಿಮಾಗೆ (Sakath movie) ನಿಶಾ ವೆಂಕಟ್ ಕೋನಾಂಕಿ ಹಾಗೂ ಸುಪ್ರಿತ್ ಬಂಡವಾಳ ಹೂಡಿದ್ದಾರೆ. ಸದ್ಯ ಸ್ಯಾಂಪಲ್ಸ್ನಲ್ಲಿ ಕ್ಯೂರಿಯಾಸಿಟಿ ಹುಟ್ಟಿಸಿರುವ ಸಖತ್ ಸಿನಿಮಾ ನವೆಂಬರ್ 26 ರಂದು (Sakath movie release on november 26th) ಬಿಗ್ ಸ್ಕ್ರೀನ್ಗೆ ಎಂಟ್ರಿ ಕೊಡಲಿದೆ.