ಕನ್ನಡದ ಜನಪ್ರಿಯ ರಿಯಾಲಿಟಿ ಶೋ, ಬಿಗ್ ಬಾಸ್ನಲ್ಲಿ ಪಾಲ್ಗೊಂಡು, ಜನಪ್ರಿಯತೆಗಳಿಸಿದ ಸ್ಪರ್ಧಿ ದಿವ್ಯ ಸುರೇಶ್, ಬಿಗ್ ಬಾಸ್ ಮನೆಗೆ ಹೋಗುವುದಕ್ಕಿಂತ ಮುಂಚೆ, ರೌಡಿ ಬೇಬಿ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ಸದ್ಯ ರೌಡಿ ಬೇಬಿ ಚಿತ್ರದ ಲಿರಿಕಲ್ ವಿಡಿಯೋ ಸಾಂಗ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರೆಡ್ಡಿ ಕೃಷ್ಣ ನಿರ್ದೇಶಿಸಿದ್ದಾರೆ. ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವವಿರುವ ರೆಡ್ಡಿ ಕೃಷ್ಣ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.
ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣವಾಗಿದ್ದು, ಲಾಕ್ಡೌನ್ ಮುಕ್ತಾಯದ ಬಳಿಕ ತೆರೆಗೆ ಬರಲಿದೆ. 32 ದಿನಗಳ ಕಾಲ ಬೆಂಗಳೂರು, ಕೇರಳ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ವಾರ್ ಫುಟ್ ಸ್ಟುಡಿಯೋ ಹಾಗೂ ಸುಮುಖ ಎಂಟರ್ ಟೈನರ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ಅರ್ಮಾನ್ ಹಾಗೂ ಅಭಿಷೇಕ್ ರಫಸ್ ಸಂಗೀತ ನಿರ್ದೇಶನ, ಸಾಮ್ರಾಟ್ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನ ಹಾಗೂ ಚಂದ್ರು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳನ್ನು ಡಾ. ವಿ ನಾಗೇಂದ್ರ ಪ್ರಸಾದ್, ಸಿಂಪಲ್ ಸುನಿ ಹಾಗೂ ಕಿನಾಲ್ ರಾಜ್ ಬರೆದಿದ್ದಾರೆ.
ಎಸ್, ಎಸ್ ರವಿಗೌಡ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯರು ದಿವ್ಯ ಸುರೇಶ್ ಹಾಗೂ ಹೀರ್ ಕೌರ್. ಅಮಿತ್, ಕೆಂಪೇಗೌಡ, ಅರುಣಾ ಬಾಲರಾಜ್, ಶ್ರೀನಾಥ್ ವಸಿಷ್ಠ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
- " class="align-text-top noRightClick twitterSection" data="">