ಬೆಂಗಳೂರು: ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ, ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ಮಾಗಡಿ ರೋಡ್ನ ಟೋಲ್ ಗೇಟ್ ಬಳಿ ಪ್ರತಿಷ್ಠಾಪನೆ ಮಾಡಲಾಗಿದ್ದ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದಾರೆ.
ಇದನ್ನೂ ಓದಿ: ಮಂಡಿಯೂರಿ ವಿಷ್ಣುವರ್ಧನ್ ಕ್ಷಮೆ ಕೇಳಿದ ವಿಜಯ್ ರಂಗರಾಜು: ಅನಿರುದ್ಧ್ ಹೇಳಿದ್ದೇನು?
ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಇಲ್ಲಿ ಪ್ರತಿಮೆ ನಿರ್ಮಿಸಲಾಗಿತ್ತು. ಕಳೆದ ವರ್ಷ ಕೂಡಾ ಇದೇ ರೀತಿ ವಿಷ್ಣು ಸ್ಮಾರಕಕ್ಕೆ ಹಾನಿಯಾಗಿತ್ತು. ಡಾ. ವಿಷ್ಣುವರ್ಧನ್ ಅವರಂತ ಮಹಾನ್ ನಟರಿಗೆ ಈ ರೀತಿ ಅಪಮಾನ ಮಾಡುವುದನ್ನು ನಾವು ಸಹಿಸುವುದಿಲ್ಲ. ಇದರಿಂದ ಡಾ. ವಿಷ್ಣು ಅಭಿಮಾನಿಗಳ ಭಾವನೆಗೆ ಧಕ್ಕೆಯುಂಟಾಗಿದೆ. ಇದು ಸಚಿವ ಸೋಮಣ್ಣ ಅವರ ಕ್ಷೇತ್ರದಲ್ಲಿ ನಡೆದಿರುವ ಘಟನೆ. ಆದ್ದರಿಂದ ಕೂಡಲೇ ಸೋಮಣ್ಣ ಅವರು ಈ ಬಗ್ಗೆ ಕ್ರಮ ಕೈಗೊಂಡು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಡಬೇಕು ಎಂದು ಡಾ. ವಿಷ್ಣುವರ್ಧನ್ ಅಭಿಮಾನಿಗಳು ಒತ್ತಾಯಿಸಿದ್ದಾರೆ.