ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ 'ಪೊಗರು' ಸಿನಿಮಾ ಆರಂಭವಾಗಿ ಮೂರು ವರ್ಷಗಳು ಕಳೆಯುತ್ತಾ ಬಂದಿದೆ. ಮೂರು ವರ್ಷಗಳಿಂದ ಧ್ರುವ ಅವರ ಯಾವುದೇ ಸಿನಿಮಾ ಬಿಡುಗಡೆಯಾಗದೆ ಅಭಿಮಾನಿಗಳು ಕೂಡಾ ಬೇಸರದಿಂದ ಇದ್ದಾರೆ. ಆದರೆ ಇನ್ನು ಕಾಯುವ ಸಮಯ ಮುಗಿದಿದೆ.
ಸೆಟ್ಟೇರಿದಾಗಿನಿಂದ ಸಾಕಷ್ಟು ಹವಾ ಎಬ್ಬಿಸಿದ್ದ 'ಪೊಗರು' ಸಿನಿಮಾ ಸದ್ಯಕ್ಕೆ ಎಡಿಟಿಂಗ್ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ. ಇಂದಿನಿಂದ ಸಿನಿಮಾಗೆ ಧ್ರುವ ಡಬ್ಬಿಂಗ್ ಆರಂಭಿಸಿದ್ದಾರೆ. ಪೋಸ್ಟರ್ ಹಾಗೂ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದಲ್ಲಿ ಧ್ರುವ ಪಕ್ಕಾ ಮಾಸ್ ಲುಕ್ನಲ್ಲಿ ಮಿಂಚಿದ್ದಾರೆ. ಆ್ಯಕ್ಷನ್ ಪ್ರಿನ್ಸ್ಗೆ ನಾಯಕಿಯಾಗಿ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ನಂದಕಿಶೋರ್ ನಿರ್ದೇಶನದ 'ಪೊಗರು' ಚಿತ್ರದ ಡಬ್ಬಿಂಗ್ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಇಂದಿನಿಂದ ಪ್ರಾರಂಭವಾಗಿದೆ. ರಶ್ಮಿಕಾ ಭಾಗದ ಡಬ್ಬಿಂಗ್ ಕೂಡಾ ಶೀಘ್ರದಲ್ಲೇ ಆರಂಭವಾಗಲಿದೆ. ಚಿತ್ರದಲ್ಲಿ ಧ್ರುವ ಅವರ ಖಡಕ್ ಡೈಲಾಗ್ಗಳಿಗೆ ಅಭಿಮಾನಿಗಳು ಫಿದಾ ಆಗುವುದರಲ್ಲಿ ಅನುಮಾನವೇ ಇಲ್ಲ. ಸದ್ಯ ಡಬ್ಬಿಂಗ್ ಕೆಲಸ ಆರಂಭಿಸಿರುವ ಚಿತ್ರತಂಡ ಈ ಬಾರಿ ಅಭಿಮಾನಿಗಳಿಗೆ ನಿರಾಸೆ ಮಾಡದೆ ಅಂದುಕೊಂಡಂತೆ ಯುಗಾದಿ ವೇಳೆಗೆ ಸಿನಿಮಾ ರಿಲೀಸ್ ಮಾಡಲು ಹಗಲು ಇರುಳು ಶ್ರಮ ವಹಿಸುತ್ತಿದೆ.