ಪ್ರತಿ ಕ್ಷೇತ್ರಗಳ ಮೇಲೂ ಕೊರೊನಾ ಹಾಗೂ ರೂಪಾಂತರಿ ಒಮಿಕ್ರಾನ್ ಪರಿಣಾಮ ಬೀರಿದೆ. ರಾಜ್ಯ ಸರ್ಕಾರ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಿನ್ನೆಯಷ್ಟೇ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನಕ್ಕೆ ಮಾತ್ರ ಅವಕಾಶ ನೀಡಿರುವುದರಿಂದ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.
ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಪ್ರೇಮ್, ಜನವರಿ 21ರಂದು ಏಕ್ ಲವ್ ಯಾ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದೆವು. ಆದರೆ, ಕೊರೊನಾ ಹಾಗೂ ಒಮಿಕ್ರಾನ್ನಿಂದಾಗಿ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಸರ್ಕಾರ ಅನುಮತಿಸಿದೆ. ಜೊತೆಗೆ ವೀಕೆಂಡ್ ಕರ್ಫ್ಯೂ ಇರುವುದರಿಂದ ಏಕ್ ಲವ್ ಯಾ ಸಿನಿಮಾವನ್ನು ಈ ತಿಂಗಳಲ್ಲಿ ಬಿಡುಗಡೆ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: 'ಹರೀಶ ವಯಸ್ಸು 36' ಚಿತ್ರದ ಹಾಡಿಗೆ ಧ್ವನಿಯಾಗಿದ್ದರು ಅಪ್ಪು
ನಟಿ ರಕ್ಷಿತಾ ಸಹೋದರ ರಾಣಾ ಏಕ್ ಲವ್ ಯಾ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ರಚಿತಾ ರಾಮ್ ಹಾಗೂ ಗ್ರೀಷ್ಮಾ ನಾಣಯ್ಯ ನಟಿಸಿರುವ ಏಕ್ ಲವ್ ಯಾ ಸಿನಿಮಾ ಟೀಸರ್ ಹಾಗೂ ಹಾಡುಗಳಿಂದಲೇ ಸ್ಯಾಂಡಲ್ವುಡ್ನಲ್ಲಿ ಕುತೂಹಲ ಹುಟ್ಟಿಸಿತ್ತು. ರಕ್ಷಿತಾ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಇನ್ನು ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಆಗಲಿರುವ ವಿಕ್ರಾಂತ್ ರೋಣ, ಗಜಾನನ ಗ್ಯಾಂಗ್ ಸಿನಿಮಾಗಳು ರಿಲೀಸ್ ಡೇಟ್ ಅನ್ನು ಮುಂದಕ್ಕೆ ಹಾಕುವ ಸಾಧ್ಯತೆ ಇದೆ. ಬಹು ನಿರೀಕ್ಷಿತ ಆರ್‌ಆರ್‌ಆರ್ ಸಿನಿಮಾ ಕೂಡ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.