ಏಕ್ ಲವ್ ಯಾ ಕನ್ನಡ ಚಿತ್ರರಂಗದಲ್ಲಿ ಚಿತ್ರದ ಶೀರ್ಷಿಕೆಯಿಂದಲೇ ಸಿಕ್ಕಾಪಟ್ಟೇ ಸದ್ದು ಮಾಡ್ತಿರೋ ಸಿನಿಮಾ. ನಿರ್ದೇಶಕ ಜೋಗಿ ಪ್ರೇಮ್ ದಿ ವಿಲನ್ ಸಿನಿಮಾ ಬಳಿಕ ಪತ್ನಿ ರಕ್ಷಿತಾ ಅವರ ಸಹೋದರ ರಾಣಾನನ್ನ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.
ಸದ್ಯ ಪೋಸ್ಟರ್ ಹಾಗೂ ಟೀಸರ್ನಿಂದಲೇ ಕನ್ನಡ ಚಿತ್ರರಂಗದಲ್ಲಿ ಕುತೂಹಲ ಮೂಡಿಸಿರುವ ಏಕ್ ಲವ್ ಯಾ ಸಿನಿಮಾದ ಮೊದಲ ಶೋ ವೀಕ್ಷಣೆ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿಗೆ ನಿರ್ದೇಶಕ ಜೋಗಿ ಪ್ರೇಮ್ ಆಹ್ವಾನ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣ ನಿವಾಸದಲ್ಲಿ ನಿರ್ದೇಶಕ ಜೋಗಿ ಪ್ರೇಮ್ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಜೋಗಿ ಪ್ರೇಮ್ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆ ಚಿತ್ರರಂಗದ ಸಾಕಷ್ಟು ವಿಷ್ಯಗಳ ಬಗ್ಗೆ ಮಾತುಕತೆ ಮಾಡಿದ್ದಾರೆ.
ಇನ್ನು ಈ ಚಿತ್ರದಲ್ಲಿ ರಕ್ಷಿತಾ ಸಹೋದರ ರಣಾ ಮೂರು ಶೇಡ್ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಏಕ್ ಲವ್ ಯಾದಲ್ಲಿ ರನ್ನ, ರೀಷ್ಮಾ ನಾಣಯ್ಯ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ರಚಿತಾ ರಾಮ್ ಈ ಚಿತ್ರದಲ್ಲಿ ಬೋಲ್ಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರೊಮ್ಯಾಂಟಿಕ್ ಥ್ರಿಲ್ಲರ್ ಕಥೆ ಆಧರಿಸಿರೋ ಏಕ್ ಲವ್ ಯಾ ಸಿನಿಮಾವನ್ನ ರಕ್ಷಿತಾ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ನಿರ್ಮಿಸಲಾಗುತ್ತಿದೆ. ಅರ್ಜುನ್ ಜನ್ಯಾ ಅವರ ಸಂಗೀತ ಮತ್ತು ಮಹೇಂದ್ರ ಸಿಂಹ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಫೆಬ್ರವರಿ 24ರಂದು ಏಕ್ ಲವ್ ಯಾ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗುತ್ತಿದೆ.
ಓದಿ: ಉದ್ಯಾನಕ್ಕೆ ಮೀಸಲಿಟ್ಟ ಪ್ರದೇಶದಲ್ಲಿ ಅಕ್ರಮ ಕಟ್ಟಡ: ಸರ್ಕಾರ, ಜಿಲ್ಲಾಧಿಕಾರಿಗೆ ಹೈಕೋರ್ಟ್ ನೋಟಿಸ್