ETV Bharat / sitara

ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಫಿಲ್ಮ್​ ಚೇಂಬರ್​ ಅಧ್ಯಕ್ಷ ಡಿ.ಆರ್​​. ಜೈರಾಜ್​ - Kannada film industry

ಚಿತ್ರೀಕರಣ ಆರಂಭಿಸಲು ಅನುಮತಿ ನೀಡಿರುವ ಕೇಂದ್ರ ಸಚಿವ ಪ್ರಕಾಶ್​​​​ ಜಾವ್ಡೇಕರ್​​ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್​. ಜೈರಾಜ್​ ಧನ್ಯವಾದ ಅರ್ಪಿಸಿದ್ದಾರೆ.

Film chamber president
ಡಿ.ಆರ್​​. ಜೈರಾಜ್​
author img

By

Published : Aug 24, 2020, 5:39 PM IST

ಸುಮಾರು 5 ತಿಂಗಳಿಂದ ಸ್ಥಗಿತಗೊಂಡಿದ್ದ ಚಿತ್ರರಂಗದ ಚಟುವಟಿಕೆಗಳನ್ನು ಮತ್ತೆ ಆರಂಭಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಫಿಲ್ಮ್ ಚೇಂಬರ್ ಅಧ್ಯಕ್ಷ ಡಿ.ಆರ್​. ಜೈರಾಜ್​ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

ಫಿಲ್ಮ್​ ಚೇಂಬರ್​ ಅಧ್ಯಕ್ಷ ಡಿ.ಆರ್​​. ಜೈರಾಜ್​

ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ಧನ್ಯವಾದ ಹೇಳಿರುವ ಜೈರಾಜ್​, ಸಿನಿಮಾ ಶೂಟಿಂಗ್ ಆರಂಭಿಸಲು ಅವಕಾಶ ನೀಡಿರುವುದು ಸಾಕಷ್ಟು ನಿರ್ಮಾಪಕರಿಗೆ ಸಂತಸ ನೀಡಿದೆ. ಅಲ್ಲದೆ ಇಷ್ಟು ದಿನಗಳ ಕಾಲ ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ,ಸಿನಿ ಕಾರ್ಮಿಕರು ಹಾಗೂ ಕಲಾವಿದರಿಗೆ ಮತ್ತೆ ಕೆಲಸ ಸಿಗಲಿದೆ. ಇಂದಿನಿಂದಲೇ ಶೂಟಿಂಗ್ ಆರಂಭಿಸಬಹುದಾಗಿದೆ. ಇದಕ್ಕೂ ಮುನ್ನ ಶೂಟಿಂಗ್ ಅನುಮತಿ ಪಡೆಯಲು ವಾರ್ತಾ ಮತ್ತು ಪ್ರಸಾರ ಇಲಾಖೆಗೆ ಅರ್ಜಿ ಸಲ್ಲಿಸಬೇಕಿತ್ತು. ಆದರೆ ಈಗ ಆನ್​​​ಲೈನ್​​​​​​​​ನಲ್ಲಿ ಅನುಮತಿ ಪಡೆಯಬಹುದಾಗಿದೆ.

ಮುಂದಿನ ತಿಂಗಳು ಕೇಂದ್ರ ಸರ್ಕಾರ ಸಭೆ ಕರೆದಿದೆ. ಈಗಾಗಲೇ ಹಂತಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದ್ದು ಶೀಘ್ರದಲ್ಲೇ ಚಿತ್ರಮಂದಿರಗಳನ್ನು ತೆರೆಯಲು ಕೂಡಾ ಅನುಮತಿ ನೀಡುವ ನಿರೀಕ್ಷೆ ಇದೆ ಎಂದು ಡಿ.ಆರ್​​​​. ಜೈರಾಜ್ ವಿಶ್ವಾಸ ವ್ಯಕ್ತಪಡಿಸಿದರು. ಶೂಟಿಂಗ್ ಆರಂಭಿಸುವ ವಿಚಾರವಾಗಿ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಹಾಗೂ ನಿರ್ದೇಶಕರ ಸಂಘಕ್ಕೆ ಪತ್ರ ಬರೆದು ಚಿತ್ರೀಕರಣ ಮಾಡಲು ಬೇಕಾದ ಎಲ್ಲಾ ಮುನ್ನೆಚರಿಕೆ ಕ್ರಮಗಳನ್ನು ವಹಿಸುವಂತೆ ಸೂಚಿಸಿದ್ದೇವೆ ಎಂದು ಜೈರಾಜ್ ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.