ಬಾಲಿವುಡ್ ಕೋರಿಯೋಗ್ರಾಫರ್ ಗಣೇಶ್ ಆಚಾರ್ಯ ವಿರುದ್ಧ ಕಳೆದ ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪದ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೆ ಮತ್ತೊಬ್ಬ ಮಹಿಳೆ ಇದೀಗ ಗಣೇಶ್ ಆಚಾರ್ಯ ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಕಳೆದ ವಾರ ಮಹಿಳೆಯೊಬ್ಬರು ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಆಚಾರ್ಯ ವಿರುದ್ಧ ದೂರು ನೀಡಿದ್ದರು. ಇದಾದ ಮೇಲೆ ಮಹಾರಾಷ್ಟ್ರ ಮಹಿಳಾ ಆಯೋಗ ಪ್ರಕರಣದ ತನಿಖೆಗೆ ಕೌನ್ಸಿಲರ್ನನ್ನು ನೇಮಿಸಿತು.
ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ಇಂಡಿಯನ್ ಫಿಲ್ಮ್ ಜನರಲ್ ಸೆಕ್ರೇಟರಿಯೂ ಆಗಿದ್ದರು. ಮಹಿಳೆ ನೀಡಿರುವ ದೂರಿನಲ್ಲಿ ನನಗೆ ಅಶ್ಲೀಲ ವಿಡಿಯೋಗಳನ್ನು ನೋಡುವಂತೆ ಗಣೇಶ್ ಒತ್ತಾಯ ಮಾಡಿದ್ದರೆಂದು ಉಲ್ಲೇಖಿಸಲಾಗಿದೆ.
ಮತ್ತೊಂದು ಆರೋಪ ಮಾಡಿರುವ ಮಹಿಳೆ, ನಾನು ಈ ಬಗ್ಗೆ IFTCಗೆ ಮಾಹಿತಿ ನೀಡಿದ ಮೇಲೆ ಆಚಾರ್ಯ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದಿದ್ದಾರೆ. ಆದ್ರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಚಾರ್ಯ, ಈ ಮಹಿಳೆ ಮತ್ತು ನಾನು 2007ರಲ್ಲಿ ಜೊತೆಯಲ್ಲಿಯೇ ಕೆಲಸ ಮಾಡಿದ್ದೇವೆ. ಆದ್ರೆ ಈ ಮಹಿಳೆ ಬಗ್ಗೆ ನನಗೆ ಅಷ್ಟಾಗಿ ಮಾಹಿತಿ ಇಲ್ಲ. ನನ್ನ ಸಲಹೆ ಮೇರೆಗೆ ಈ ಮಹಿಳೆ ಮೇಲೆ ಹಲ್ಲೆಯಾಗಿದೆ ಎಂಬುದು ಸುಳ್ಳು ಎಂದು ಗಣೇಶ್ ಪ್ರತಿಕ್ರಿಯಿಸಿದ್ದಾರೆ.