ರಿಷಭ್ ಶೆಟ್ಟಿ ನಟನೆ, ನಿರ್ದೇಶನ, ನಿರ್ಮಾಣ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಈಗ ಅವರ ಕೈಯ್ಯಲ್ಲಿ ಸಾಲು ಸಾಲು ಚಿತ್ರಗಳಿವೆ. ಸದ್ಯಕ್ಕೆ 'ಹೀರೋ' ಸಿನಿಮಾ ಚಿತ್ರೀಕರಣ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಚಿತ್ರದಲ್ಲಿ ರಿಷಭ್ ಜೊತೆಗೆ ಗಾನವಿ ಲಕ್ಷ್ಮಣ್ ನಾಯಕಿಯಾಗಿ ನಟಿಸಿದ್ದಾರೆ. 4 ದಿನಗಳ ಹಿಂದೆ ಬಿಡುಗಡೆಯಾದ ನೆನಪಿನ ಹುಡುಗಿ... ಹಾಡಿಗೆ ಸಿನಿಪ್ರಿಯರು ಫಿದಾ ಆಗಿದ್ದಾರೆ.
- " class="align-text-top noRightClick twitterSection" data="">
ಇದನ್ನೂ ಓದಿ: ಶೂಟಿಂಗ್ ವೇಳೆ ಆಯತಪ್ಪಿ ಬಿದ್ದ ವಿಡಿಯೋ ಹಂಚಿಕೊಂಡು ತಾನೇ ನಕ್ಕ ಕಣ್ಸನ್ನೆ ಹುಡುಗಿ
ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಚಿತ್ರೀಕರಿಸಲಾದ ಹಾಡು ಕೇಳಲು, ನೋಡಲು ಬಹಳ ಸುಂದರವಾಗಿದೆ. ಯೋಗರಾಜ್ ಭಟ್ ಬರೆದಿರುವ ಈ ಹಾಡಿಗೆ ಬಿ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಜಯ್ ಪ್ರಕಾಶ್ ಈ ಹಾಡನ್ನು ಹಾಡಿದ್ದಾರೆ. ಇದುವರೆಗೂ ಸುಮಾರು 9 ಲಕ್ಷಕ್ಕೂ ಹೆಚ್ಚು ಮಂದಿ ಈ ಹಾಡನ್ನು ನೋಡಿ ಮೆಚ್ಚಿಕೊಂಡಿದ್ದಾರೆ. 'ಹೀರೋ' ಸಿನಿಮಾ ಮಾರ್ಚ್ 5 ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ರಿಷಭ್ ಶೆಟ್ಟಿ ಫಿಲ್ಮ್ ಪ್ರೊಡಕ್ಷನ್ ಬ್ಯಾನರ್ ಅಡಿ ರಿಷಭ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರವನ್ನು ಬಿ ಭರತ್ ರಾಜ್ ನಿರ್ದೇಶಿಸಿದ್ದಾರೆ. ಎಂ.ಭರತ್ ರಾಜ್ ಹಾಗೂ ಅನಿರುದ್ಧ್ ಮಹೇಶ್ ಸಿನಿಮಾ ಕಥೆ ಬರೆದಿದ್ದಾರೆ. ರಿಷಭ್ ಶೆಟ್ಟಿ , ಗಾನವಿ ಲಕ್ಷ್ಮಣ್ ಜೊತೆ ಪ್ರಮೋದ್ ಶೆಟ್ಟಿ, ಮಂಜುನಾಥ್ ಗೌಡ ಹಾಗೂ ಇನ್ನಿತರರು ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.