ನಟ ಆರ್ಯವರ್ಧನ್ ಅಲಿಯಾಸ್ ಅನಿರುದ್ಧ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಕಿರುತೆರೆ ಲೋಕದಲ್ಲಿ ಸೆನ್ಸೇಷನ್ ಹುಟ್ಟುಹಾಕಿರುವ ನಟ ಅನಿರುದ್ಧ್ ಇಂದು ಎಲ್ಲೆಡೆ ಮನೆ ಮಾತಾಗಿದ್ದಾರೆ.

ಅವರಿಗೆ ಬೆಳ್ಳಿ ತೆರೆಯಲ್ಲಿ ಹೇಳಿಕೊಳ್ಳುವಂತಹ ಬ್ರೇಕ್ ಸಿಗಲಿಲ್ಲ. ಆದರೆ, 18 ವರ್ಷಗಳ ನಂತರ ಕಿರುತೆರೆಯಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ರಂಗಭೂಮಿ ಕಲಾವಿದರಾಗಿದ್ದ ಅನಿರುದ್ಧ್, ವಿಷ್ಣುವರ್ಧನ್ ಅವರಿಗೆ ಸಿಕ್ಕಿದ್ದು ಆಚಾನಕ್ ಅಗಿ. ಆದರೆ ಕಿರುತೆರೆಯಲ್ಲಿ ಮೂಡಿಬರುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅನಿರುದ್ಧ್ ಕಾಣಿಸಿಕೊಂಡಿರುವ ರೀತಿ ವಿಷ್ಣುವರ್ಧನ್ ಅವರನ್ನು ಮತ್ತೆ ನೆನಪಿಸಿದೆ.
- " class="align-text-top noRightClick twitterSection" data="
">