ಭುವನಂ ಫೌಂಡೇಷನ್ ವತಿಯಿಂದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ, ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ವ್ಯವಸ್ಥೆ ಮಾಡುವ ಮೂಲಕ ನೂರಾರು ಜನರ ಕಷ್ಟಕ್ಕೆ ಸ್ಪಂದಿಸಿದ್ದರು. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ, ಕೊರೊನಾ ರೋಗಿಗಳ ಮುಂದೆ ಡ್ಯಾನ್ಸ್ ಮಾಡುವ ಮೂಲಕ ಸೋಂಕಿತರನ್ನು ರಂಜಿಸಿದ್ದಾರೆ.
ಕೊರೊನಾ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಮಡಿಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಮುಂದೆ ಡ್ಯಾನ್ಸ್ ಮಾಡುವ ಮೂಲಕ ರೋಗಿಗಳನ್ನ ರಂಜಿಸಿದ್ದಾರೆ.
ಈ ಆಸ್ಪತ್ರೆಯಲ್ಲಿ ಸುಮಾರು 400 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿ ವಾರ್ಡ್ಗೂ ಹೋಗಿ ರೋಗಿಗಳ ಮುಂದೆ ಕೊಡುವ ಸಂಸ್ಕೃತಿಯ ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಿದರು.
ಈ ಹಿಂದೆ ಬೆಂಗಳೂರು ಹಾಗೂ ಮಡಿಕೇರಿಯ ಸುತ್ತಮುತ್ತ ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುತ್ತಿದ್ದ ಕೂಲಿ ಕಾರ್ಮಿಕರಿಗೆ ಆಹಾರದ ಕಿಟ್ ನೀಡುವ ಮೂಲಕ ತಮ್ಮ ಕೈಲಾದ ಸಹಾಯ ಮಾಡಿದ್ದರು.