ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರಿಗೆ ಲಘು ಹೃದಯಾಘಾತವಾಗಿದೆ.
ಕೆಲ ದಿನಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಅವರಿಗೆ ಇಂದು ಮುಂಜಾನೆ ಲಘು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಜೈದೇವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ಹಾರ್ಟ್ ಸರ್ಜರಿ ನಡೆಯುವ ಸಾಧ್ಯತೆಯಿದ್ದು, ಎರಡು ದಿನ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಲಿದ್ದಾರೆ ಎಂದು ಅವರ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇನ್ನು ಈ ಹಿಂದೆ ಎರಡು ಬಾರಿ ಮುಖ್ಯಮಂತ್ರಿ ಚಂದ್ರು ಅವರಿಗೆ ಲಘು ಹೃದಯಾಘಾತವಾಗಿತ್ತು.