ಬೆಂಗಳೂರು: ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ವಿರುದ್ಧ ದಾಖಲಾಗಿದ್ದ ಎಫ್ಐಆರ್ನ್ನು ಹೈಕೋರ್ಟ್ ರದ್ದು ಮಾಡಿದೆ.
ಬಾಡಿಗೆ ಮನೆ ಖಾಲಿ ಮಾಡುವ ವೇಳೆ ಮನೆಯಲ್ಲಿದ್ದ ಪೀಠೋಪಕರಣ, ಸೇರಿದಂತೆ ಸುಮಾರು 28 ಲಕ್ಷ ಮೌಲ್ಯದ ವಸ್ತುಗಳಿಗೆ ಹಾನಿ ಮಾಡಿದ ಆರೋಪ ಪುಷ್ಪಾ ವಿರುದ್ಧ ಕೇಳಿ ಬಂದಿತ್ತು. ಈ ಸಂಬಂಧ ಜೂನ್ 7 ರಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ ಮನೆ ಮಾಲೀಕರಾದ ಡಾ. ವನಜಾ ದೂರು ನೀಡಿದ್ದರು. ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಪುಷ್ಪಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಎಫ್ಐಆರ್ ರದ್ದುಪಡಿಸಿ ಆದೇಶ ಹೊರಡಿಸಿದೆ.