ETV Bharat / sitara

ಶ್ರೀಮುರಳಿ ಜೊತೆ ಹೊಸ ಚಿತ್ರ ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಮ್ಸ್​​​​​​​​

ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಮೂಲಕ ನಿರ್ಮಾಪಕ ವಿಜಯ್ ಕಿರಗಂದೂರು ಹೊಸ ಚಿತ್ರವನ್ನು ಅನೌನ್ಸ್ ಮಾಡಿದ್ದು ರೋರಿಂಗ್ ಸ್ಟಾರ್ ಶ್ರೀಮುರಳಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇಂದು ಶ್ರೀಮುರಳಿ ಹುಟ್ಟುಹಬ್ಬವಾಗಿದ್ದು ಬರ್ತ್​ಡೇ ವಿಶೇಷವಾಗಿ ಈ ಚಿತ್ರವನ್ನು ಅನೌನ್ಸ್ ಮಾಡಲಾಗಿದೆ.

author img

By

Published : Dec 17, 2020, 12:41 PM IST

Srimurali
ಶ್ರೀಮುರಳಿ

ರೋರಿಂಗ್ ಸ್ಟಾರ್ ಶ್ರೀಮುರಳಿ ಇಂದು 39ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಬೆಳಗ್ಗೆಯಷ್ಟೇ 'ಮದಗಜ' ಚಿತ್ರತಂಡ, ಸಿನಿಮಾ ಟೀಸರ್ ಬಿಡುಗಡೆ ಮಾಡುವ ಮೂಲಕ ಶ್ರೀಮುರಳಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಇದೀಗ ಅವರ ಹೊಸ ಸಿನಿಮಾವೊಂದು ಅನೌನ್ಸ್ ಆಗಿದೆ. ಕೆಜಿಎಫ್ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಇತ್ತೀಚೆಗಷ್ಟೇ ಪ್ರಭಾಸ್ ಅಭಿನಯದ 'ಸಲಾರ್' ಎಂಬ ಸಿನಿಮಾ ಅನೌನ್ಸ್ ಮಾಡಿತ್ತು. ಇದೀಗ ಮುರಳಿ ಅಭಿನಯದ ಹೊಸ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ಅನೌನ್ಸ್ ಮಾಡಿದೆ.

ಇದನ್ನೂ ಓದಿ: ಶ್ರೀ ಮುರಳಿ ಹುಟ್ಟುಹಬ್ಬಕ್ಕೆ ರಿವೀಲ್ ಆಯ್ತು 'ಮದಗಜ' ಟೀಸರ್​

ವಿಜಯ್ ಕಿರಗಂದೂರ್ ಅನೌನ್ಸ್ ಮಾಡಿರುವ ಶ್ರೀಮುರಳಿ ಹೊಸ ಚಿತ್ರದ ಹೆಸರು 'ಬಘೀರ'. ಇದಕ್ಕೂ ಮುನ್ನ'ಲಕ್ಕಿ' ಸಿನಿಮಾ ನಿರ್ದೇಶನ ಮಾಡಿದ್ದ ಡಾ. ಸೂರಿ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಡಿಸೆಂಬರ್ 17 ರಂದು ಬೆಳಗ್ಗೆ 11.59ಕ್ಕೆ ಹೊಸ ಸಿನಿಮಾವೊಂದನ್ನು ಘೋಷಿಸುತ್ತಿರುವುದಾಗಿ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಅನೌನ್ಸ್ ಮಾಡಿತ್ತು. ಅದರಂತೆ ಇಂದು ಹೇಳಿದ ಸಮಯಕ್ಕೆ ಹೊಸ ಚಿತ್ರವನ್ನು ಅನೌನ್ಸ್ ಮಾಡಿದೆ. ಇದು ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ 8 ನೇ ಸಿನಿಮಾ. ಇದೇ ಮೊದಲ ಬಾರಿಗೆ ಶ್ರೀ ಮುರಳಿ ಅಭಿನಯದ ಸಿನಿಮಾವನ್ನು ವಿಜಯ್ ಕಿರಗಂದೂರ್​​​ ನಿರ್ಮಿಸಿದ್ದಾರೆ. ಸದ್ಯಕ್ಕೆ ಶ್ರೀಮುರಳಿ 'ಮದಗಜ' ಚಿತ್ರದಲ್ಲಿ ಬ್ಯುಸಿ ಇದ್ದು 55 ದಿನಗಳ ಚಿತ್ರೀಕರಣ ಪೂರ್ಣಗೊಂಡಿದೆ. ಇನ್ನು 20 ದಿನಗಳಷ್ಟೇ ಬಾಕಿ ಇದ್ದು ಜನವರಿ ವೇಳೆಗೆ ಚಿತ್ರೀಕರಣ ಮುಕ್ತಾಯಗೊಳ್ಳಲಿದೆ. ಈ ಸಿನಿಮಾ ನಂತರ ಶ್ರೀಮುರಳಿ 'ಬಘೀರ' ಚಿತ್ರೀಕರಣ ಆರಂಭವಾಗಲಿದೆಯಂತೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.