2020 ಪೆಬ್ರುವರಿ 9 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಕಿಚ್ಚ ಸುದೀಪ್ ಅವರನ್ನು ಆಹ್ವಾನಿಸಲಾಗಿದೆ.
ರಾಜನಹಳ್ಳಿ ಶ್ರೀವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳವರು,ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರು ಮತ್ತು ನಿಟ್ಟೂರು ನಾರಾಯಣಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮಿಗಳು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಪುಟ್ಟೇನಹಳ್ಳಿಯ ನಿವಾಸದಲ್ಲಿ ಭೇಟಿಯಾಗಿ ಉತ್ಸವಕ್ಕೆ ಆಹ್ವಾನಿಸಿದ್ದಾರೆ.