ETV Bharat / sitara

ವೈರಲ್ ಫೋಟೋ ಪ್ರಸಾರ ಮಾಡದಂತೆ ಜಾಕ್ವೆಲಿನ್ ಫರ್ನಾಂಡಿಸ್ ಮನವಿ - Jacqueline sukesh viral pictures

ಖಾಸಗಿತನ ಮತ್ತು ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಇರುವ ಫೋಟೋಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಬೇಡಿ ಎಂದು ಇನ್ಸ್​ಟಾದಲ್ಲಿ ಮನವಿ ಮಾಡಿರುವ ಜಾಕ್ವೆಲಿನ್ ಫರ್ನಾಂಡಿಸ್, ಕಾಮೆಂಟ್ ಸೆಕ್ಷನ್ ಬ್ಲಾಕ್ ಮಾಡಿದ್ದಾರೆ.

Jacqueline Fernandez requests media for privacy as intimate pictures with Sukesh Chandrashekhar go viral
Jacqueline Request: ವೈರಲ್ ಫೋಟೋಗಳನ್ನು ಪ್ರಸಾರ ಮಾಡದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮನವಿ
author img

By

Published : Jan 9, 2022, 11:07 AM IST

ಮುಂಬೈ(ಮಹಾರಾಷ್ಟ್ರ): ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಜೊತೆಯಲ್ಲಿರುವ ತನ್ನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅಸಮಾಧಾನ ಹೊರಹಾಕಿದ್ದಾರೆ.

ಇನ್ಸ್​ಟಾಗ್ರಾಮ್ ಖಾತೆಯಲ್ಲಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ನಟಿ, 'ಈ ದೇಶ ಮತ್ತು ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವ ನೀಡಿದ್ದಾರೆ. ಇದರಲ್ಲಿ ಮಾಧ್ಯಮಗಳ ಸ್ನೇಹಿತರೂ ಇದ್ದಾರೆ. ಅವರಿಂದ ನಾನು ಬಹಳಷ್ಟು ಕಲಿತಿದ್ದೇನೆ. ನಾನೀಗ ಸಮಸ್ಯೆಯಲ್ಲಿ ಸಿಲುಕಿದ್ದೇನೆ ಎಂಬುದು ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಗೊತ್ತಾಗಿದೆ ಎಂದು ನಾನು ಭಾವಿಸುತ್ತೇನೆ' ಎಂದಿದ್ದಾರೆ.

ಇದರ ಜೊತೆಗೆ 'ನನ್ನ ಖಾಸಗಿತನ ಮತ್ತು ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಇರುವ ಫೋಟೋಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಬೇಡಿ ಎಂದು ಅದೇ ನಂಬಿಕೆಯಲ್ಲೇ ಕೇಳಿಕೊಳ್ಳುತ್ತಿದ್ದೇನೆ. ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಮಾಡುವುದಿಲ್ಲ. ನನಗೂ ಈ ರೀತಿ ಮಾಡುವುದಿಲ್ಲ ಎಂದು ನನಗೆ ಖಾತ್ರಿಯಿದೆ. ನ್ಯಾಯ ಮತ್ತು ಒಳ್ಳೆಯತನ ಯಾವಾಗಲೂ ಮೇಲುಗೈ ಸಾಧಿಸುತ್ತವೆ ಎಂದು ಆಶಿಸುತ್ತೇವೆ. ಧನ್ಯವಾದ' ಎಂದು ಜಾಕ್ವೆಲಿನ್ ಇನ್ಸ್​ಟಾಗ್ರಾಮ್​ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ಸ್​ಟಾಗ್ರಾಮ್​ನಲ್ಲಿ ಈ ರೀತಿಯ ಹೇಳಿಕೆಯನ್ನು ಪೋಸ್ಟ್ ಮಾಡಿರುವ ಜಾಕ್ವೆಲಿನ್ ಫರ್ನಾಂಡಿಸ್ ಕಾಮೆಂಟ್ ಸೆಕ್ಷನ್ ಬ್ಲಾಕ್ ಮಾಡಿದ್ದಾರೆ.

ಉದ್ಯಮಿಯೊಬ್ಬರ ಪತ್ನಿಗೆ 200 ಕೋಟಿ ರೂಪಾಯಿ ವಂಚಿಸಿರುವ ಆರೋಪದಡಿ ಸುಖೇಶ್ ಚಂದ್ರಶೇಖರ್​​ನನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಸಹೋದರ ವಿಧಿವಶ, ಇಂದು ಅಂತ್ಯಕ್ರಿಯೆ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.