ನಟ ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಮುತ್ತಿಗೆ ಘಟನೆಗೆ ಅಸಮಾಧಾನ ಹೊರಹಾಕಿರುವ ನಟ ಜಗ್ಗೇಶ್ ಅಭಿಮಾನಿಗಳು ಫಿಲ್ಮ್ ಚೇಂಬರ್ ಬಳಿ ಆಗಮಿಸಿದ್ದಾರೆ.
40 ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಕಲಾಸೇವೆ ಸಲ್ಲಿಸಿದ ಹಿರಿಯರು ಜಗ್ಗೇಶ್ ಅವರಿಗೆ ಈ ರೀತಿ ಮಾಡಿದ್ದು, ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಘಟನೆ ಬಗ್ಗೆ ಫಿಲ್ಮ್ ಚೇಂಬರ್ನಲ್ಲಿ ದೂರು ನೀಡಲು ನಟ ಜಗ್ಗೇಶ್ ಅಭಿಮಾನಿಗಳು ಫಿಲ್ಮ್ ಚೇಂಬರ್ಗೆ ಆಗಮಿಸಿದ್ದಾರೆ.
ಫಿಲ್ಮ್ ಚೇಂಬರ್ ಬಳಿ ನೂರಕ್ಕೂ ಹೆಚ್ಚು ಅಭಿಮಾನಿಗಳು ಜಮಾಯಿಸಿದ್ದಾರೆ.