ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಅನು ಸಿರಿಮನೆ ಬಣ್ಣದ ಲೋಕಕ್ಕೆ ಪರಿಚಿತರಾದ ಚೆಂದುಳ್ಳಿ ಚೆಲುವೆಯ ಹೆಸರು ಮೇಘಾ ಶೆಟ್ಟಿ. ಐಎಎಸ್ ಅಧಿಕಾರಿಯಾಗಬೇಕೆಂಬ ಹಂಬಲವಿದ್ದ ಮೇಘಾ ನಟನಾ ಕ್ಷೇತ್ರಕ್ಕೆ ಬಂದದ್ದು ಆಕಸ್ಮಿಕವಾಗಿ. ಸೋಷಿಯಲ್ ಮೀಡಿಯಾ ಮೂಲಕ ನಟನಾ ಪಯಣ ಶುರು ಮಾಡಿದ ಕರಾವಳಿ ಕುವರಿ ಇದೀಗ ಅನು ಅಂತಾನೇ ಫೇಮಸ್ಸು!
ಮೇಘಾ ಶೆಟ್ಟಿ ಇದೇ ಮೊದಲ ಬಾರಿಗೆ ಬಣ್ಣದ ಲೋಕದಲ್ಲಿ ಕಾಣಿಸಿಕೊಂಡಿದ್ದಾರೆ ನಿಜ. ಆದರೆ ಅವರ ಅಕ್ಕ ಹಾರ್ದಿಕಾ ಶೆಟ್ಟಿ ಈಗಾಗಲೇ ನಟನಾ ಲೋಕದಲ್ಲಿ ಗುರುತಿಸಿಕೊಂಡ ಚೆಲುವೆ. ನೀನಾಸಂ ಸತೀಶ್ ಅಭಿನಯದ ಲೂಸಿಯಾ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಹಾರ್ದಿಕಾ ಶೆಟ್ಟಿ ಬೆಳ್ಳಿತೆರೆಯಲ್ಲಿ ತಮ್ಮ ನಟನಾ ಕಂಪನ್ನು ಪಸರಿಸಿದ್ದಾರೆ.
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಗಲಾಟೆ ಸಿನಿಮಾದಲ್ಲಿ ಎರಡನೇ ನಾಯಕಿಯಾಗಿ ಹಾರ್ದಿಕಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇದೆಲ್ಲದರ ಜೊತೆಗೆ ಕನ್ನಡ ಸಿನಿರಂಗದ ಜೊತೆಗೆ ತೆಲುಗು ಮತ್ತು ತಮಿಳು ಸಿನಿರಂಗದಲ್ಲೂ ಮಿಂಚಿದ್ದಾರೆ.
ಅಕ್ಕ ಬೆಳ್ಳಿತೆರೆಯ ಮೂಲಕ ನಟನಾ ಪಯಣ ಆರಂಭಿಸಿದ್ದರೆ, ತಂಗಿ ಬಂದಿದ್ದು ಕಿರುತೆರೆಯಿಂದ ಆರಂಭಿಸಿದ್ದಾರೆ. ಮೊದಲ ಧಾರಾವಾಹಿಯಲ್ಲೇ ಸಾವಿರಾರು ಪ್ರೇಕ್ಷಕರನ್ನು ಸಂಪಾದಿಸಿರುವ ಮೇಘಾ ಇಂದು ಅನು ಸಿರಿಮನೆ ಎಂದೇ ಜನಪ್ರಿಯತೆ ಪಡೆದಿದ್ದಾರೆ.