ಹೈದರಾಬಾದ್ : ನಟಿ ಕಾಜಲ್ ಅಗರ್ವಾಲ್ ತಮ್ಮ ಪತಿ ಗೌತಮ್ ಕಿಚ್ಲು ಅವರೊಂದಿಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟಿ ಪ್ರಸ್ತುತ ದುಬೈನಲ್ಲಿ ಗಾಲಾ ಸಮಯವನ್ನು ಹೊಂದಿದ್ದು, ಅಲ್ಲಿ ಅವರು ಬೇಬಿ ಬಂಪ್ ಅನ್ನು ತೋರಿಸುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಜನವರಿ 1ರಂದು ಗೌತಮ್ ಅವರು ತಮ್ಮ ಮೊದಲ ಮಗುವನ್ನು ನಿರೀಕ್ಷಿಸುತ್ತಿರುವುದಾಗಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದಾರೆ. ಕಳೆದ ವಾರ ಅವರು ರಜೆಗಾಗಿ ದುಬೈಗೆ ಹೋಗಿದ್ದರು. ಅಲ್ಲಿಯೂ ನಟಿ ತನ್ನ ಸಾಮಾಜಿಕ ಮಾಧ್ಯಮದಲ್ಲಿ ತನ್ನ ದುಬೈ ಡೈರಿಗಳಿಂದ ಚಿತ್ರಗಳು ಮತ್ತು ವಿಡಿಯೋಗಳೊಂದಿಗೆ ತನ್ನ ಅಭಿಮಾನಿಗಳ ಸಂಪರ್ಕದಲ್ಲಿದ್ದಾರೆ.
- " class="align-text-top noRightClick twitterSection" data="
">
ತನ್ನ ಇನ್ಸ್ಸ್ಟಾಗ್ರಾಂನಲ್ಲಿ ನಟಿ ಅಲ್ಟ್ರಾ ಐಷಾರಾಮಿ ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಚಿತ್ರಗಳನ್ನು ಹಂಚಿಕೊಳ್ಳುತ್ತಾ, ' ದಿ ಟಚಿಂಗ್ ಮೈ ಫೇಸ್ ಲೈಕ್ ದಿ ಸಾಫ್ಟೇಸ್ಟ್ ಕೇರ್ಸ್' ಎಂದು ಬರೆದುಕೊಂಡಿದ್ದಾರೆ.
ನಟಿ ಹಳದಿ ಬಣ್ಣದ ಟಾಪ್ ಅನ್ನು ಧರಿಸಿ ಬೀಚ್ ಬಳಿ ನಿಂತಿರುವ ಫೋಟೋ ಶೇರ್ ಮಾಡಿದ್ದಾರೆ. ಕಾಜಲ್ ಕ್ಯಾಮೆರಾಗೆ ಪೋಸ್ ನೀಡುತ್ತಿರುವುದನ್ನು ಎರಡನೇ ಕ್ಲಿಕ್‌ನಲ್ಲಿ ನೋಡಬಹುದಾಗಿದೆ. ಅಕ್ಟೋಬರ್ 30, 2020ರಂದು ನಟಿ ಉದ್ಯಮಿಯಾಗಿರುವ ಗೌತಮ್ ಕಿಚ್ಲು ಅವರೊಂದಿಗೆ ಮದುವೆಯಾಗಿದ್ದಾರೆ.
ಓದಿ: ಕೇಂದ್ರಕ್ಕೆ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಿದ್ದೇನೆ : ದೆಹಲಿಯಲ್ಲಿ ಸಿಎಂ ಹೇಳಿಕೆ