ನೈಜ ಘಟನೆ ಆಧಾರವಾಗಿಟ್ಟುಕೊಂಡು ಈ ಚಿತ್ರಕಥೆ ಹೆಣೆಯಲಾಗಿದೆ. ತುಂಬಾ ತಿರುವುಗಳಿಲ್ಲದಿದ್ದರೂ, ನೈಜತೆಯಿಂದ ಕೂಡಿದ ಕಥೆ. ‘ಭಾನು ಮತ್ತು ಭೂಮಿ’ ಒಬ್ಬರನ್ನೊಬ್ಬರು ನೋಡುತ್ತಾ ಸನಿಹ ಸೇರಲೆಂದು ಹಪಹಪಿಸುತ್ತಿದ್ದರೂ ಸಾಧ್ಯವಾಗದೇ ತಮ್ಮಲ್ಲೇ ಇರುವ ಭಾವನೆಗಳನ್ನು ಹೇಗೆ ವ್ಯಕ್ತಪಡಿಸುತ್ತಾರೆಂಬುದೇ ಚಿತ್ರದ ಹೂರಣ.
ಜಿ.ಕೆ.ಆದಿ ನಿರ್ದೇಶನ ಈ ಚಿತ್ರಕ್ಕೆ ಛಾಯಾಗ್ರಹಣ - ಗಣೇಶ್ ಹೆಗ್ಡೆ, ಸಂಗೀತ- ಎ.ಎಂ.ನೀಲ್, ಸಂಕಲನ- ಶ್ರೀನಿವಾಸ್.ಪಿ.ಬಾಬು, ನಿರ್ವಹಣೆ-ಗಂಡಸಿ ರಾಜು ಅವರು ಒದಗಿಸಿದ್ದಾರೆ.
ಇನ್ನು ತಾರಾಗಣದಲ್ಲಿ ಸೂರ್ಯಪ್ರಭ್, ರಕ್ಷತಾ ಮಲ್ನಾಡ್. ಶೋಭರಾಜ್, ಗಿರೀಶ್, ಮೈಕೋ ಮಂಜು, ಸಿಲ್ವಾಮೂರ್ತಿ, ಹಂಸಾ, ಸೂರ್ಯಕಿರಣ್, ಪಲ್ಲವಿ ಶೆಟ್ಟಿ, ಹೆಚ್.ಎಂ.ಟಿ. ವಿಜಿ, ಪ್ರವೀಣ್, ಮಿಮಿಕ್ರಿ ರಾಜು ಹಾಗೂ ವಿಶೇಷ ಪಾತ್ರದಲ್ಲಿ ರಂಗಾಯಣ ರಘು ಅಭಿನಯಿಸುತ್ತಿದ್ದಾರೆ.