ಕೊರೊನಾ ಪರಿಣಾಮದಿಂದಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಪ್ರದರ್ಶನ ಹಾಗೂ ಚಿತ್ರೀಕರಣ ಸ್ಥಗಿತಗೊಂಡಿದ್ದು, ಸಿನಿಮಾ ವಿಭಾಗದ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಶಿವರಾಜ್ ಕುಮಾರ್ ನೇತೃತ್ವದ ತಂಡ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಮನವಿ ಸಲ್ಲಿಸಿತು.
ನಟರಾದ ಶಿವರಾಜ್ ಕುಮಾರ್, ಯಶ್, ದುನಿಯಾ ವಿಜಯ್, ಸಾಧು ಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಗುಬ್ಬಿ ಜೈರಾಜ್, ನಟಿ ತಾರಾ, ಸಂಗೀತ ನಿರ್ದೇಶಕ ಗುರುಕಿರಣ್, ನಿರ್ಮಾಪಕ ಕೆ.ಮಂಜು ಸೇರಿದಂತೆ ಹಲವು ತಾರೆಯರು ಸಿನಿಮಾ ಕಾರ್ಮಿಕರು, ಪೋಷಕ ಕಲಾವಿದರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಸಿಎಂಗೆ ಮನವಿ ಮಾಡಿದರು.
ಚಿತ್ರರಂಗದ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಈ ಕಾರಣಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶಿವರಾಜ್ ಕುಮಾರ್ ನೇತೃತ್ವದ ತಂಡ ಮನವಿ ಮಾಡಿದೆ. ಇದಕ್ಕೆ ಯಡಿಯೂರಪ್ಪ ಅವರು ಕೂಡ ಉತ್ತಮವಾಗಿಯೇ ಸ್ಪಂದಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್, ಚಿತ್ರರಂಗದ ಹಲವು ಸಮಸ್ಯೆಗಳ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ ಎಂದರು. ಯಶ್ ಮಾತನಾಡಿ, ಚಿತ್ರರಂಗದಲ್ಲಿ ಹಲವು ಪ್ರತಿಭೆಗಳಿಗೆ ಅವಕಾಶ ಸಿಗುತ್ತಿಲ್ಲ. ಅದು ಆಗಬೇಕು ಎಂದು ಹೇಳಿದರು.
-
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ @BSYBJP ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
— CM of Karnataka (@CMofKarnataka) September 9, 2020 " class="align-text-top noRightClick twitterSection" data="
ಡಿಸಿಎಂ @drashwathcn, ಕಲಾವಿದರಾದ @NimmaShivanna, ತಾರಾ ಅನುರಾಧ, @TheNameIsYash, @OfficialViji, ಕೆ.ಎಫ್.ಸಿ.ಸಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಮತ್ತಿತರರು ಉಪಸ್ಥಿತರಿದ್ದರು pic.twitter.com/MKk7zNVPag
">ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ @BSYBJP ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
— CM of Karnataka (@CMofKarnataka) September 9, 2020
ಡಿಸಿಎಂ @drashwathcn, ಕಲಾವಿದರಾದ @NimmaShivanna, ತಾರಾ ಅನುರಾಧ, @TheNameIsYash, @OfficialViji, ಕೆ.ಎಫ್.ಸಿ.ಸಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಮತ್ತಿತರರು ಉಪಸ್ಥಿತರಿದ್ದರು pic.twitter.com/MKk7zNVPagಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ @BSYBJP ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
— CM of Karnataka (@CMofKarnataka) September 9, 2020
ಡಿಸಿಎಂ @drashwathcn, ಕಲಾವಿದರಾದ @NimmaShivanna, ತಾರಾ ಅನುರಾಧ, @TheNameIsYash, @OfficialViji, ಕೆ.ಎಫ್.ಸಿ.ಸಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಮತ್ತಿತರರು ಉಪಸ್ಥಿತರಿದ್ದರು pic.twitter.com/MKk7zNVPag