ETV Bharat / sitara

ರಾಜಧಾನಿಯ ಭವ್ಯ ಚರಿತ್ರೆ ಸಾರಲಿದೆ 'ಮೇಡ್​ ಇನ್ ಬೆಂಗಳೂರು'ಸಿನಿಮಾ - ನಟ ಅನಂತ್ ನಾಗ್

ಈ ಚಿತ್ರವನ್ನು ನಾನು ಒಪ್ಪಿಕೊಳ್ಳುವುದಕ್ಕೆ ಮುಖ್ಯ ಕಾರಣ ಅನಂತ್​ ನಾಗ್​ ಮತ್ತು ಪ್ರಕಾಶ್​ ಬೆಳವಾಡಿ ಎಂದರೆ ತಪ್ಪಿಲ್ಲ. ಈ ಚಿತ್ರದಲ್ಲಿ ಅವರ ಜೊತೆಗೆ ನಟಿಸುವುದಕ್ಕೆ ಅವಕಾಶವಿಲ್ಲದಿದ್ದರೂ, ಅವರಿಬ್ಬರೂ ನಟಿಸಿರುವ ಚಿತ್ರದಲ್ಲಿ ನಾನೂ ಇದ್ದೇನೆ ಎನ್ನುವುದು ಖುಷಿ.'ರಂಗಿತರಂಗ' ನಂತರ ಹಲವು ಹೊಸ ನಿರ್ದೇಶಕರ ಚಿತ್ರಗಳಲ್ಲಿ ವಿಭಿನ್ನ ಪಾತ್ರ ಮಾಡುವ ಅವಕಾಶ ಸಿಕ್ಕಿದೆ. ಇದೊಂದು ಅದ್ಭುತವಾದ ಕಥೆ. ನೀವೆಲ್ಲರೂ ನೋಡಿ ಹರಿಸಿ, ಹಾರೈಸಿ..

kannada-made-in-bangalore-film-title-launch
ಮೇಡ್​ ಇನ್ ಬೆಂಗಳೂರು
author img

By

Published : Aug 21, 2021, 5:27 PM IST

ಬೆಂಗಳೂರು ಎಂಬ ಮಾಯಾನಗರಿ ಬಗ್ಗೆ ಹಲವಾರು ಸಿನಿಮಾ ಬಂದಿವೆ. ಇದೀಗ 'ಮೇಡ್ ಇನ್ ಬೆಂಗಳೂರು' ಟೈಟಲ್ ಇಟ್ಟುಕೊಂಡು, A million dreams, One city ಎಂಬ ಅಡಿಬರಹವಿರುವ ಚಿತ್ರವೊಂದು ಬರ್ತಿದೆ.

ಕನ್ನಡ ಚಿತ್ರರಂಗದ ಪ್ರಮುಖ ನಟರಾದ ಅನಂತನಾಗ್, ಸಾಯಿಕುಮಾರ್‌ ಹಾಗೂ ಪ್ರಕಾಶ್ ಬೆಳವಾಡಿ ಮೂರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ಯುವ ನಟನಾಗಿ ಮಧುಸೂದನ್ ಗೋವಿಂದ್ ಅಭಿನಯ ಮಾಡಿದ್ದಾರೆ. ಯುವ ನಿರ್ದೇಶಕ ಪ್ರದೀಪ್ ಶಾಸ್ತ್ರಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಇತ್ತೀಚೆಗೆ ನಗರದ ಖಾಸಗಿ ಹೋಟೆಲ್​ನಲ್ಲಿ ನೆರವೇರಿತು.

ಈ ಚಿತ್ರದಲ್ಲಿ ಬಹುಮುಖ್ಯ ಪಾತ್ರ ಮಾಡುತ್ತಿರುವ ಅನಂತ್ ನಾಗ್ ಮಾತನಾಡಿ, ಕೆಲವು ತಿಂಗಳುಗಳ ಹಿಂದೆ ನಿರ್ಮಾಪಕ ಬಾಲಕೃಷ್ಣ ಮತ್ತು ನಿರ್ದೇಶಕ ಪ್ರದೀಪ್ ಶಾಸ್ತ್ರಿ ಈ ಚಿತ್ರದ ಸಂಬಂಧ ಮನೆಗೆ ಬಂದಿದ್ದರು. ಪ್ರದೀಪ್ ಕೊಟ್ಟ ಸ್ಕ್ರಿಪ್ಟ್​ ಓದಿದೆ. ಬಹಳ ಖುಷಿಯಾಯಿತು. ನನ್ನದು ಇದರಲ್ಲಿ ಹೀರಾ ನಂದಾನಿ ಎಂಬ ಸಿಂಧಿ ವ್ಯಾಪಾರಿಯ ಪಾತ್ರ.

ಬಹಳ ಚೆನ್ನಾಗಿ ಈ ಪಾತ್ರವನ್ನು ಬರೆದಿದ್ದಾರೆ. ನನಗೆ ಒಬ್ಬ ಸಿಂಧಿ ವ್ಯಾಪಾರಿಯ ಪರಿಚಯವಿತ್ತು. ಅವರೇ ಖ್ಯಾತ ನಿರ್ಮಾಪಕ ಮತ್ತು ವಿತರಕ ಪಾಲ್​ ಚಂದಾನಿ. ಅವರ ಮ್ಯಾನರಿಸಂ ಬಳಸಿಕೊಳ್ಳಬಹುದಾ ಎಂದು ನಿರ್ದೇಶಕರನ್ನು ಕೇಳಿದೆ. ಅವರು ಒಪ್ಪಿದರು. ಅವರ ಮಾತಿನ ಧಾಟಿ ಮತ್ತು ಮ್ಯಾನರಸಿಂಗಳನ್ನು ಈ ಚಿತ್ರದಲ್ಲಿ ಸ್ವಲ್ಪ ಮಟ್ಟಿಗೆ ಬಳಸಿಕೊಂಡಿದ್ದೇನೆ ಎಂದು ಹಿರಿಯ ನಟ ಅನಂತನಾಗ್ ಹೇಳಿದರು.

kannada made in bangalore film title launch
ಮೇಡ್​ ಇನ್ ಬೆಂಗಳೂರು ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ

ಈ ಚಿತ್ರದ ಕುರಿತು ಡೈಲಾಗ್ ಕಿಂಗ್ ಸಾಯಿಕುಮಾರ್ ಮಾತನಾಡಿ, ಈ ಚಿತ್ರವನ್ನು ನಾನು ಒಪ್ಪಿಕೊಳ್ಳುವುದಕ್ಕೆ ಮುಖ್ಯ ಕಾರಣ ಅನಂತ್​ ನಾಗ್​ ಮತ್ತು ಪ್ರಕಾಶ್​ ಬೆಳವಾಡಿ ಎಂದರೆ ತಪ್ಪಿಲ್ಲ. ಈ ಚಿತ್ರದಲ್ಲಿ ಅವರ ಜೊತೆಗೆ ನಟಿಸುವುದಕ್ಕೆ ಅವಕಾಶವಿಲ್ಲದಿದ್ದರೂ, ಅವರಿಬ್ಬರೂ ನಟಿಸಿರುವ ಚಿತ್ರದಲ್ಲಿ ನಾನೂ ಇದ್ದೇನೆ ಎನ್ನುವುದು ಖುಷಿ.

'ರಂಗಿತರಂಗ' ನಂತರ ಹಲವು ಹೊಸ ನಿರ್ದೇಶಕರ ಚಿತ್ರಗಳಲ್ಲಿ ವಿಭಿನ್ನ ಪಾತ್ರ ಮಾಡುವ ಅವಕಾಶ ಸಿಕ್ಕಿದೆ. ಇದೊಂದು ಅದ್ಭುತವಾದ ಕಥೆ. ನೀವೆಲ್ಲರೂ ನೋಡಿ ಹರಿಸಿ, ಹಾರೈಸಿ ಎಂದರು.

ಮೇಡ್ ಇನ್ ಬೆಂಗಳೂರು ಚಿತ್ರದಲ್ಲಿ ಸ್ಟೈಲಿಷ್ ಆಗಿ ಕಾಣಿಸಿಕೊಂಡಿರುವ ಪ್ರಕಾಶ್ ಬೆಳವಾಡಿ ಮಾತನಾಡಿ, ಈ ಕಥೆ ತುಂಬಾ ಚೆನ್ನಾಗಿದೆ. ಇಂತಹ ಸಿನಿಮಾಗಳ ನಿರ್ಮಾಣ ಜಾಸ್ತಿಯಾದರೆ ಕನ್ನಡ ಚಿತ್ರರಂಗದ ಹಿಂದಿನ ವೈಭವದ ದಿನಗಳು ಮತ್ತೆ ಮರುಕಳಿಸಲಿವೆ ಎಂದರು.

ಈ ಚಿತ್ರವನ್ನ ನಿರ್ಮಾಣ ಮಾಡಿರುವ ಬಾಲಕೃಷ್ಣ ಮಾತನಾಡುತ್ತಾ, ನನಗೆ ನಿರ್ದೇಶಕ ಪ್ರದೀಪ್ ಶಾಸ್ತ್ರಿ ‌ಏಳು ವರ್ಷಗಳ ಪರಿಚಯ.‌ ನನ್ನ ಬಳಿ ಉತ್ತಮ ಕಥೆಯಿದೆ. ಸಿನಿಮಾ ಮಾಡೋಣ ಎಂದರು.

ಕಥೆ ಕೇಳಿದ ನಾನು, ಸಮಾಜಕ್ಕೆ ಏನಾದರೂ ಉತ್ತಮ‌ ಸಂದೇಶ ನೀಡುವ ಸಲುವಾಗಿ ಈ ಚಿತ್ರ ನಿರ್ಮಾಣ ಮಾಡಿದ್ದೇನೆ ಅಂದರು‌. ಇದರ ಜೊತೆಗೆ ಸಾಹಿತಿ, ಪತ್ರಕರ್ತ ಜೋಗಿ ಅವರು ಸಹ ಈ ಸಮಾರಂಭಕ್ಕೆ ಆಗಮಿಸಿ ಬೆಂಗಳೂರು ಹಾಗೂ ತಮ್ಮ ನಡುವಿನ ಬಾಂಧವ್ಯ ವಿವರಿಸಿ, ಚಿತ್ರತಂಡಕ್ಕೆ ಶುಭ ಕೋರಿದರು.

ಈ ಚಿತ್ರದಲ್ಲಿ ಅನಂತ್ ನಾಗ್, ಪ್ರಕಾಶ್ ಬೆಳವಾಡಿ, ಸಾಯಿಕುಮಾರ್ ಅಲ್ಲದೇ, ನಾಯಕನಾಗಿ ಮಧುಸೂದನ್ ಗೋವಿಂದ್ ಅಭಿನಯಿಸಿದ್ದಾರೆ. ಪುನೀತ್ ಮಾಂಜ, ವಂಶಿಧರ್, ಹಿಮಾಂಶಿ ವರ್ಮಾ, ಸುಧಾ ಬೆಳವಾಡಿ, ಮಂಜುನಾಥ್ ಹೆಗ್ಡೆ, ಶಂಕರಮೂರ್ತಿ, ವಿನೀತ್, ರಮೇಶ್ ಭಟ್ ಹಾಗೂ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.

ಇನ್ನು, ಬೆಂಗಳೂರಿನ ಭವ್ಯ ಚರಿತ್ರೆ ಬಗ್ಗೆ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ ನಿರ್ದೇಶಕ ಪ್ರದೀಪ್ ಶಾಸ್ತ್ರೀ. ಅಶ್ವಿನ್ ಪಿ ಕುಮಾರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಭಜರಂಗ್ ಕೊಣತಮ್ ಛಾಯಾಗ್ರಹಣ ಹಾಗೂ ಶಾಂತಕುಮಾರ್ ಅವರ ಸಂಕಲನ ಮೇಡ್ ಇನ್ ಬೆಂಗಳೂರು ಚಿತ್ರಕ್ಕಿದೆ.

ಬಹುತೇಕ ಚಿತ್ರೀಕರಣ ಮುಗಿಸಿ ಮೇಡ್ ಇನ್ ಬೆಂಗಳೂರು ಸಿನಿಮಾ ಪೋಸ್ಟ್ ಪ್ರೊಡಕ್ಷನ್ ವರ್ಕ್‌ನಲ್ಲಿ ಬ್ಯುಸಿಯಾಗಿದೆ. ಈ ಕೊರೊನಾ ಮುಗಿದ ಬಳಿಕ ಮೇಡ್ ಇನ್ ಬೆಂಗಳೂರು ಸಿನಿಮಾವನ್ನ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.