ETV Bharat / sitara

'ಸಾಹೋ'ಗಾಗಿ ಕನ್ನಡ ಚಿತ್ರಗಳಿಗೆ ಗೇಟ್​ಪಾಸ್: ಕನ್ನಡಪರ ಸಂಘಟನೆಗಳ ಆಕ್ರೋಶ - ಡಿ.ಆರ್​​​​​. ಜೈರಾಜ್

ನಾಳೆ ವಿಶ್ವಾದ್ಯಂತ 'ಸಾಹೋ' ಸಿನಿಮಾ ಬಿಡುಗಡೆಯಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಸುಮಾರು 2000 ಸ್ಕ್ರೀನ್​​ಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದ್ದು, ಇದರಿಂದ ಕನ್ನಡ ಸಿನಿಮಾಗಳಿಗೆ ತೊಂದರೆಯಾಗಲಿದೆ. ಈ ಕಾರಣ ಅಷ್ಟೊಂದು ಸ್ಕ್ರೀನ್​​​ಗಳಲ್ಲಿ ಸಿನಿಮಾ ಬಿಡುಗಡೆಯಾಗದಂತೆ ತಡೆಯಬೇಕು ಎಂದು ಕನ್ನಡಪರ ಸಂಘಟನೆಗಳು ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿವೆ.

'ಸಾಹೋ'
author img

By

Published : Aug 29, 2019, 9:37 PM IST

ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ಅಭಿನಯದ 'ಸಾಹೋ' ಸಿನಿಮಾ ನಾಳೆ ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಸ್ಕ್ರೀನ್​​​ಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದ್ದರೆ ಕರ್ನಾಟಕದಾದ್ಯಂತ ಸಾವಿರಕ್ಕೂ ಹೆಚ್ಚು ಥಿಯೇಟರ್​​​​ಗಳಲ್ಲಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

ಫಿಲ್ಮ್ ಚೇಂಬರ್​​ಗೆ ದೂರು ನೀಡಿದ ಕನ್ನಡಪರ ಸಂಘಟನೆಗಳು

ಆದರೆ ನಾಳೆ ಬಿಡುಗಡೆಯಾಗಲಿರುವ ಈ ಪ್ಯಾನ್ ಇಂಡಿಯಾ ಸಿನಿಮಾಗೆ ಸಂಕಷ್ಟ ಎದುರಾಗಿದೆ. 'ಸಾಹೋ' ಬಿಡುಗಡೆ ಮಾಡುವ ಉದ್ದೇಶದಿಂದ ಕನ್ನಡ ಸಿನಿಮಾಗಳಿಗ ಗೇಟ್​ಪಾಸ್ ನೀಡಲಾಗಿದೆ. ಕನ್ನಡ ಸಿನಿಮಾಗಳಿಗೆ ಇದರಿಂದ ಬಹಳ ತೊಂದರೆಯಾಗುತ್ತಿದೆ. ಇದರಿಂದ ಅಷ್ಟೊಂದು ಥಿಯೇಟರ್​​​​ಗಳಲ್ಲಿ ಸಿನಿಮಾ ಬಿಡುಗಡೆಯಾಗದಂತೆ ತಡೆಯಬೇಕು ಎಂದು ಕನ್ನಡ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಕನ್ನಡಪರ ಹೋರಾಟಗಾರರು ಹಾಗೂ ವಾಣಿಜ್ಯ ಮಂಡಳಿ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ಕೂಡಾ ನಡೆಯಿತು.

ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೌನವಾಗಿದ್ದು ವಾಣಿಜ್ಯ ಮಂಡಳಿ ಕನ್ನಡ ಚಿತ್ರಗಳ ನೆರವಿಗೆ ಬರುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ಸದಸ್ಯರು ಫಿಲಂ ಚೇಂಬರ್ ಮುಂದೆ ಧರಣಿ ನಡೆಸಿದರು. ನಂತರ ಹೋರಾಟಗಾರರ ಮನವೊಲಿಸಿದ ಚೇಂಬರ್ ಅಧ್ಯಕ್ಷ ಡಿ.ಆರ್​​​​​. ಜೈರಾಜ್ ಮಲ್ಟಿಪ್ಲೆಕ್ಸ್​​​​ ಕೇಂದ್ರ ಕಚೇರಿಗಳು ಬಾಂಬೆಯಲ್ಲಿದೆ. ನಾನು ನಾಳೆ ಬಾಂಬೆಗೆ ಹೋಗಿ ಈ ವಿಚಾರವನ್ನು ಒಕ್ಕೂಟದ ಗಮನಕ್ಕೆ ತರುತ್ತೇನೆ. ಅಲ್ಲದೆ ಈಗಾಗಲೇ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಮಾಲೀಕರ ಜೊತೆ ಮಾತನಾಡಿದ್ದೇನೆ. 'ಸಾಹೋ' ಚಿತ್ರಕ್ಕೆ ಶೋಗಳನ್ನು ಕಡಿಮೆ ಮಾಡಿ ಕನ್ನಡ ಚಿತ್ರಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಮಲ್ಟಿಪ್ಲೆಕ್ಸ್ ಮಾಲೀಕರು ಕೂಡಾ ಇದಕ್ಕೆ ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ ಎಂದು ಜೈರಾಜ್ ಹೇಳಿದ್ದಾರೆ.

ನಂತರ ಮಾತನಾಡಿದ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಈ ವಿಚಾರವಾಗಿ ವಾಣಿಜ್ಯ ಮಂಡಳಿ ಸರ್ಕಾರದ ಗಮನಕ್ಕೆ ತರಬೇಕು. ಅಲ್ಲದೇ 'ಸಾಹೋ' ಚಿತ್ರವನ್ನು ಕರ್ನಾಟಕದಲ್ಲಿ ವಿತರಣೆ ಮಾಡುತ್ತಿರುವ ವಿತರಕರನ್ನು ಕರೆದು ಪ್ರದರ್ಶನ ಮಾಡದಂತೆ ನಿರ್ದೇಶನ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Intro:ಬಾಹುಬಲಿ ಪ್ರಭಾಸ್ ಅಭಿನಯದ ಸಾಹೋ ಚಿತ್ರ ನಾಳೆ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗ್ತಿದ್ದು.
ಕರ್ನಾಟಕದಲ್ಲಿ "ಸಾಹೋ" ಗೆ ಸಂಕಷ್ಟ ಎದುರಾಗಿದೆ. ಪ್ರಭಾಸ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಸಾಹೋ ಕರ್ನಾಟಕದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಸಾಹೋ ಚಿತ್ರ ಬಿಡುಗಡೆ ಮಾಡುವ ಉದ್ದೇಶದಿಂದ ಕನ್ನಡ ಚಿತ್ರಗಳಿಗೆ ಗೇಟ್ಪಾಸ್ ನೀಡಲಾಗಿದೆ. ತೆಲುಗು ಸಾಹೋ ಚಿತ್ರಕ್ಕಾಗಿ ಕನ್ನಡ ಚಿತ್ರಗಳನ್ನು ಕೊಲ್ಲಲಾಗುತ್ತಿದೆ. ಕರ್ನಾಟಕದಲ್ಲಿ ಸಚಿತ್ರ 2000 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗದಂತೆ ತಡೆಯಬೇಕು ಎಂದು
ಕರ್ನಾಟಕ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಕನ್ನಡಪರ ಹೋರಾಟಗಾರರು ಹಾಗೂ ವಾಣಿಜ್ಯ ಮಂಡಳಿ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ನಡೆಯಿತು.

Body:ಅಲ್ಲದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೌನವಾಗಿದ್ದು ಕನ್ನಡ ಚಿತ್ರಗಳ ನೆರವಿಗೆ ಬರುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಫಿಲಂ ಚೇಂಬರ್ ಮುಂದೆ ಧರಣಿ ನಡೆಸಿದರು. ನಂತರ ಹೋರಾಟಗಾರರ ಮನವೊಲಿಸಿದ ಚೇಂಬರ್ ನ ಅಧ್ಯಕ್ಷರಾದ ಡಿ ಆರ್ ಜೈರಾಜ್ ಮಲ್ಟಿಫ್ಲೆಕ್ಸ್ಗಳು ಹೆಡ್ ಆಫೀಸ್ ಗಳು ಬಾಂಬೆಯಲ್ಲಿ ವೆ. ಈ ವಿಚಾರವಾಗಿ ನಾನು ನಾಳೆ ಬಾಂಬೆಗೆ ಹೋಗಿ ಒಕ್ಕೂಟದ ಗಮನಕ್ಕೆ ತರುತ್ತೇನೆ. ಅಲ್ಲದೆ ಈಗಾಗಲೇ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಮಾಲೀಕರ ಜೊತೆ ಮಾತನಾಡಿದ್ದೇನೆ. ಸಾಹೋ ಚಿತ್ರಕ್ಕೆ ಶೋಗಳನ್ನು ಕಡಿಮೆ ಮಾಡಿ ಕನ್ನಡ ಚಿತ್ರಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಮಲ್ಟಿಪ್ಲೆಕ್ಸ್ ಮಾಲೀಕರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

Conclusion:ಅಲ್ಲದೇ ಇದೇ ವೇಳೆ ಮಾತನಾಡಿದ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಚಳುವಳಿ ನಾಗೇಶ್ ಈ ವಿಚಾರವಾಗಿ ವಾಣಿಜ್ಯ ಮಂಡಳಿ ಸರ್ಕಾರದ ಗಮನಕ್ಕೆ ತರಬೇಕು. ಅಲ್ಲದೇ ಸಾಹೋ ಚಿತ್ರವನ್ನು ಕರ್ನಾಟಕದಲ್ಲಿ ವಿತರಣೆ ಮಾಡುತ್ತಿರುವ ವಿತರಕರನ್ನು ಕರೆದು ಪ್ರದರ್ಶನದಂತೆ ಅವರಿಗೆ ನಿರ್ದೇಶನ ಮಾಡಬೇಕು ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು..

ಸತೀಶ ಎಂಬಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.