ETV Bharat / sitara

'ಕನ್ನಡಿಗ' ಚಿತ್ರದ ಫಸ್ಟ್​ಲುಕ್​ ರಿಲೀಸ್​.. ಗುಣಭದ್ರನಾಗಿ ರವಿಮಾಮ ಮಿಂಚಿಂಗ್​ - ಕನ್ನಡಿಗ ಸಿನಿಮಾ

ಈ ಚಿತ್ರದಲ್ಲಿ ಸುಮಲತಾ ಅಂಬರೀಶ್ ಕೂಡ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ನಾನು ಈ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ ಎಂದು ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ..

ಕನ್ನಡಿಗ ಚಿತ್ರದ ಫಸ್ಟ್​ಲುಕ್​
ಕನ್ನಡಿಗ ಚಿತ್ರದ ಫಸ್ಟ್​ಲುಕ್​
author img

By

Published : Nov 30, 2020, 5:31 PM IST

ಕುರುಕ್ಷೇತ್ರ ಸಿನಿಮಾದಲ್ಲಿ ಶ್ರೀಕೃಷ್ಣನ ಪಾತ್ರಕ್ಕೆ ಬಣ್ಣ ಹಚ್ಚಿದ್ದ ಕ್ರೇಜಿಸ್ಟಾರ್ ರವಿಚಂದ್ರನ್, ಕನ್ನಡಿಗ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಈ ಮೂಲಕ ಸಿನಿರಸಿಕರನ್ನು ಮನರಂಜಿಸಲು ಬರುತ್ತಿದ್ದಾರೆ.

ಮಲೆನಾಡಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದ್ದು, ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ರವಿಚಂದ್ರನ್ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ರವಿಚಂದ್ರನ್ ಲಿಪಿಕಾರ ಗುಣಭದ್ರನ ಲುಕ್ ಅನಾವರಣ ಆಗಿದೆ.

1858ರ ನಂತರದ ಐತಿಹಾಸಿಕ ಕಥಾಹಂದರ ಹೊಂದಿರುವ ಸಿನಿಮಾ ಇದಾಗಿದ್ದು, ಈ ನಾಡಿನ ಇತಿಹಾಸವನ್ನು ದಾಖಲಿಸುವಲ್ಲಿ ಲಿಪಿಕಾರರ ವಂಶದ ಕೊಡುಗೆ ಅಪಾರ. ಈ ಪಾತ್ರದಲ್ಲಿ ನಟ ರವಿಚಂದ್ರನ್ ನಟಿಸುತ್ತಿದ್ದಾರೆ.

ಕನ್ನಡಿಗ ಚಿತ್ರದ ಫಸ್ಟ್​ಲುಕ್​
ಕನ್ನಡಿಗ ಚಿತ್ರದ ಫಸ್ಟ್​ಲುಕ್​

ಫರ್ಡಿನೆಂಡ್​ ಕಿಟ್ಟೆಲ್ ಪಾತ್ರದಲ್ಲಿ ಜೆಮಿ ವಾಲ್ಟರ್ ಕಾಣಿಸಿಕೊಳ್ಳಲಿದ್ದಾರೆ. ರವಿಚಂದ್ರನ್ ಜೋಡಿಯಾಗಿ ಪಾವನಾ ಅಭಿನಯಿಸುತ್ತಿದ್ದು, ದತ್ತಣ್ಣ, ಬಾಲಾಜಿ ಮನೋಹರ್ ಮತ್ತು ಅಚ್ಯುತ್ ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.

ಈ ಚಿತ್ರದಲ್ಲಿ ಸುಮಲತಾ ಅಂಬರೀಶ್ ಕೂಡ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ನಾನು ಈ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ ಎಂದು ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ.

ಜಟ್ಟಾ, ಮೈತ್ರಿ ಹಾಗು ಗಿರ್ಮಿಟ್ ಸಿನಿಮಾಗಳನ್ನ ನಿರ್ಮಾಣ ಮಾಡಿರುವ ಎನ್ ಎಸ್ ರಾಜಕುಮಾರ್ ಈ ಚಿತ್ರಕ್ಕೆ ಹಣ ಹೂಡಿಕೆ ಮಾಡುತ್ತಿದ್ದಾರೆ. ಸದ್ಯ ರವಿಚಂದ್ರನ್ ಲಿಪಿಕಾರ ಗುಣಭದ್ರನ ಪಾತ್ರದ ಲುಕ್ ರಿವೀಲ್ ಆಗಿದ್ದು, ಸಖತ್ ಸದ್ದು ಮಾಡುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.