ಕರ್ನಾಟಕ ಚಲನಚಿತ್ರ ಛಾಯಾಗ್ರಾಹಕರ ಸಂಘ ಬರೋಬ್ಬರಿ 35 ವಸಂತಗಳನ್ನು ಪೂರೈಸಿದ್ದು, ಇದೇ ಸಂಭ್ರಮದಲ್ಲಿ ಕರ್ನಾಟಕ ಚಲನ ಚಿತ್ರ ಛಾಯಾಗ್ರಾಹಕ ಸಂಘ ಮೊದಲ ಬಾರಿಗೆ ವಿಶೇಷವಾಗಿ ಅದ್ದೂರಿ ಕಾರ್ಯಕ್ರಮವನ್ನು ಫೆಬ್ರವರಿ 9ಕ್ಕೆ ಅಯೋಜಿಸಿದೆ. ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಚಿತ್ರರಂಗದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿರುವವರನ್ನು ಗುರುತಿಸಿ 108 ಜನರಿಗೆ ಸನ್ಮಾನ ಮಾಡಲಾಗುತ್ತದೆ.
ಇನ್ನು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಛಾಯಾಗ್ರಾಹಕರ ಸಂಘದ ಈ ಕಾರ್ಯಕ್ರಮಕ್ಕೆ ಇಡೀ ಚಿತ್ರರಂಗ ಬೆನ್ನಿಗೆ ನಿಂತಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪವರ್ ಸ್ಟಾರ್ ಪುನೀತ್ ರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ಚಿಕ್ಕಣ್ಣ, ಸಾಧುಕೋಕಿಲ, ಉಮಾಶ್ರೀ, ರಾಘವೇಂದ್ರ ರಾಜಕುಮಾರ್, ಮಾಜಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಾ ಅಶ್ವಥ್ ಸೇರಿದಂತೆ ಹಲವರು ಕೈಜೋಡಿಸಿದ್ದಾರೆ.
ಈ ಕಾರ್ಯಕ್ರಮ ಕರ್ನಾಟಕ ಚಲನಚಿತ್ರ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಜಿಜೆ ಕೃಷ್ಣ ನೇತೃತ್ವದಲ್ಲಿ ನಡೆಯುತ್ತಿದ್ದು, ಈ ಸಮಾರಂಭದಲ್ಲಿ ಛಾಯಾಗ್ರಾಹಕರ ಕುಟುಂಬದವರಿಗೂ ಅರಿಶಿನ-ಕುಂಕುಮ ಕೊಟ್ಟು ಸತ್ಕಾರ ಮಾಡಲಾಗುತ್ತದೆ.