ETV Bharat / sitara

ಕಂಗನಾ ರಣಾವತ್​ ವಿರುದ್ಧ ಎಫ್​ಐಆರ್ ದಾಖಲಿಸಿ: ಪೊಲೀಸರಿಗೆ ತುಮಕೂರು ಕೋರ್ಟ್ ಆದೇಶ - ಕಂಗನಾ ರಣಾವತ್​ ಟ್ವೀಟ್​ ವಿವಾದ

ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಕೃಷಿ ಮಸೂದೆಗಳನ್ನ ವಿರೋಧಿಸಿದ್ದ ರೈತರ ವಿರುದ್ಧ ಅವಹೇಳನಕಾರಿ ಫೋಸ್ಟ್​ ಮಾಡಿದ್ದಕ್ಕಾಗಿ ಕಂಗನಾ ರಣಾವತ್​ ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

Kangana Ranaut
Kangana Ranaut
author img

By

Published : Oct 9, 2020, 8:00 PM IST

Updated : Oct 9, 2020, 11:32 PM IST

ತುಮಕೂರು: ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದ ವೇಳೆ ಟ್ವಿಟರ್​​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಬಾಲಿವುಡ್​​ ನಟಿ ಕಂಗನಾ ವಿರುದ್ಧ ಇದೀಗ ಪ್ರಕರಣ ದಾಖಲು ಮಾಡುವಂತೆ ಪೊಲೀಸರಿಗೆ ತುಮಕೂರು ಕೋರ್ಟ್​ ಆದೇಶ ನೀಡಿದೆ.

FIR against Kangana Ranaut
ಪ್ರಕರಣ ದಾಖಲು ಮಾಡುವಂತೆ ಪೊಲೀಸರಿಗೆ ತುಮಕೂರು ಕೋರ್ಟ್​ ಆದೇಶ

ಪ್ರಕರಣ ದಾಖಲು ಮಾಡುವಂತೆ ವಕೀಲ ಎಲ್.​ ರಮೇಶ್ ನಾಯ್ಕ್​ ಜೆಎಂಎಫ್​ಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ತುಮಕೂರು ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್​​ಗೆ ಪ್ರಕರಣ ದಾಖಲು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಸೆಕ್ಷನ್​ 156(3) ರ ಅಡಿ ದೂರು ದಾಖಲು ಮಾಡಿಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ. ಸೆಪ್ಟೆಂಬರ್​​ 21ರಂದು ನಟಿ ಕಂಗನಾ ರಣಾವತ್​​ ತಮ್ಮ ಟ್ವಿಟರ್​​ ಖಾತೆಯಲ್ಲಿ ಕೃಷಿ ಮಸೂದೆ ಪ್ರತಿಭಟನೆ ವಿರೋಧವಾಗಿ ಟ್ವೀಟ್​ ಮಾಡಿದ್ದರು.

ಕಂಗನಾ ರಣಾವತ್​ ವಿರುದ್ಧ ಎಫ್​ಐಆರ್ ದಾಖಲಿಸಿ: ಪೊಲೀಸರಿಗೆ ತುಮಕೂರು ಕೋರ್ಟ್ ಆದೇಶ

ಏನಿದು ಪ್ರಕರಣ?

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನ ಭಯೋತ್ಪಾದಕರಿಗೆ ಹೋಲಿಕೆ ಮಾಡಿ ಟ್ವೀಟ್ ಮಾಡಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂಗನಾ ವಿರುದ್ಧ ತುಮಕೂರು ಜೆಎಂಎಫ್​ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು.

karnataka-court-directs-police-to-register-fir-against-kangana-ranaut-for-her-anti-farmer-tweet
ವಕೀಲ ಎಲ್.​ ರಮೇಶ್ ನಾಯ್ಕ್ ನೀಡಿದ್ದ ದೂರು

ಇದನ್ನೂ ಓದಿ: ಬಾಲಿವುಡ್ ನಟಿ ಕಂಗನಾ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗೆ ಕರ್ನಾಟಕ, ಪಂಜಾಬ್​, ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ವೇಳೆ ಕಂಗನಾ ಟ್ವೀಟ್ ಮಾಡಿದ್ದರು.

Last Updated : Oct 9, 2020, 11:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.