ಬಾಲಿವುಡ್ ನಟಿ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ಅವರ ಮದುವೆ ಸಿದ್ಧತೆ ಕಾರ್ಯ ಭರದಿಂದ ಸಾಗುತ್ತಿದೆ.
ವಿಕ್ಕಿ ಕೌಶಲ್ ಹಾಗೂ ನಟಿ ಕತ್ರಿನಾ ಕೈಫ್ ನಡುವೆ ಪ್ರೇಮಾಂಕುರವಾಗಿದ್ದು, ಸದ್ಯದಲ್ಲೇ ವಿವಾಹವಾಗಲಿದ್ದಾರೆ. ಈ ಹಿನ್ನೆಲೆ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ಸಿಕ್ಸ್ ಸೆನ್ಸ್ ಫೋರ್ಟ್ ಹೋಟೆಲ್‌ನಲ್ಲಿ (Six Senses Fort Hotel) ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇಬ್ಬರೂ ಉತ್ತಮ ಕಲಾವಿದರು. ವಿಕ್ಕಿ ಕೌಶಲ್ ಅಭಿನಯದ ಇತ್ತೀಚೆಗಷ್ಟೇ ಬಿಡುಗಡೆಯಾದ 'ಸರ್ದಾರ್ ಉದಾಮ್' ( Sardar Udham) ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅದೇ ಸಮಯದಲ್ಲಿ ಕತ್ರಿನಾ ಕೈಫ್ ಅಭಿನಯದ 'ಸೂರ್ಯವಂಶಿ' (Sooryavanshi) ಚಿತ್ರವೂ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡುತ್ತಿದೆ.