‘ಕೆಜಿಎಫ್ 2’ ಚಿತ್ರದ ಶೂಟಿಂಗ್ ಈಗಾಗಲೇ ಮುಗಿದಿದೆ. ಜುಲೈ 16ರಂದು ಈ ಸಿನಿಮಾ ತೆರೆ ಕಾಣುವುದು ಬಹುತೇಕ ಖಚಿತವಾಗಿದೆ. ಸದ್ಯಕ್ಕೆ ಚಿತ್ರದ ಕೆಲಸಗಳು ಯಾವ ಹಂತದಲ್ಲಿವೆ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಇತ್ತು. ಅದಕ್ಕೆ ಪ್ರಶಾಂತ್ ನೀಲ್ ಉತ್ತರ ನೀಡಿದ್ದಾರೆ.
ಸದ್ಯಕ್ಕೆ ಕೆಜಿಎಫ್ 2 ಡಬ್ಬಿಂಗ್ ಕೆಲಸಗಳು ಭರದಿಂದ ಸಾಗುತ್ತಿವೆ. ಆ ಖುಷಿ ಹಂಚಿಕೊಳ್ಳುವ ಸಲುವಾಗಿ ಪ್ರಶಾಂತ್ ನೀಲ್ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ 'ಡಬ್ಬಿಂಗ್ ವಿಥ್ ರಾಕಿ ಈಸ್ ಆಲ್ವೇಸ್ ರಾಕಿಂಗ್' ಎಂದು ಬರೆದುಕೊಂಡಿದ್ದಾರೆ.
ಇನ್ನು, ಬಹುನಿರೀಕ್ಷಿತ ಈ ಚಿತ್ರ ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಯಶ್, ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಡಿಫರೆಂಟ್ ಗೆಟಪ್‌ನಲ್ಲಿ ನೋಡುಗರನ್ನು ಹುಚ್ಚೆಬ್ಬೆಸಲಿದ್ದಾರೆ.