ವಿಕ್ರಾಂತ್ ರೋಣ ಸಿನಿಮಾ ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಸಿನಿಮಾ ರಂಗದಲ್ಲಿಯೂ ಹೆಚ್ಚು ಸುದ್ದಿ ಮಾಡುತ್ತಿದೆ. ಕಿಚ್ಚ ಸುದೀಪ್ ಸ್ಟೈಲಿಷ್ ಅವತಾರದಲ್ಲಿ ಕಾಣಿಸಿಕೊಂಡಿರುವ ಈ ಸಿನಿಮಾ ಆಗಸ್ಟ್ 19ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ಬಹಿರಂಗ ಪಡಿಸಿತ್ತು.
ಇದೀಗ ಕಿಚ್ಚ ಸುದೀಪ್ ಚಿತ್ರದ ಡಬ್ಬಿಂಗ್ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಬಹುದಿನಗಳ ನಂತರ ಸಿನಿಮಾ ಡಬ್ಬಿಂಗ್‌ಗಾಗಿ ಮೈಕ್ ಮುಂದೆ ನಿಂತಿರೋದಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮಾಹಿತಿ ಹಂಚಿಕೊಂಡಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾ ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಇನ್ನು ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ಸುದೀಪ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡುತ್ತಿದ್ದಾರೆ.
ಕಿಚ್ಚ ವಿಕ್ರಾಂತ್ ರೋಣನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಿರೂಪ್ ಭಂಡಾರಿ, ನೀತು ಅಶೋಕ್, ಶ್ರದ್ಧಾ ಶ್ರೀನಾಥ್ ಹೀಗೆ ಅನೇಕ ಕಲಾವಿದರು ಈ ಚಿತ್ರದಲ್ಲಿದ್ದಾರೆ. ನಿರ್ಮಾಪಕ ಜಾಕ್ ಮಂಜು ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ವಿಕ್ರಾಂತ್ ರೋಣ ಸಿನಿಮಾ 3ಡಿ ವರ್ಷನ್ ನಲ್ಲಿ ಬರುತ್ತಿರುವುದು ಮತ್ತೊಂದು ವಿಶೇಷ.
ಆಗಸ್ಟ್ ತಿಂಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ತೆರೆಕಾಣುವ ದಿನಾಂಕ ನಿಗದಿಯಾಗಿತ್ತು. ಆದರೆ ಲಾಕ್ಡೌನ್ನಿಂದಾಗಿ ಹಾಗೂ ಕೋಟಿಗೊಬ್ಬ-3 ಚಿತ್ರದಿಂದಾಗಿ ಈ ಸಿನಿಮಾ ರಿಲೀಸ್ ಡೇಟ್ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.