ತೆರೆ ಮೇಲೆ ಬರಲು ಸಜ್ಜಾಗಿರುವ 'ಪೈಲ್ವಾನ್' ಚಿತ್ರದ ಮೊದಲ ಲಿರಿಕಲ್ ವಿಡಿಯೋ ಸಾಂಗ್ ಇಂದು ರಿಲೀಸ್ ಆಗಿದೆ.
'ಕಣ್ಮಣಿಯೇ ಕಣ್ಣು ಹೊಡಿಯೇ' ಸಾಲುಗಳ ಈ ಮೆಲೋಡಿ ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯಕ್ಕೆ ಅರ್ಜುನ್ ಜನ್ಯಾ ರಾಗ ಸಂಯೋಜನೆ ಮಾಡಿರುವ ಈ ಹಾಡು ಸಂಜೀತ್ ಹೆಗ್ಡೆ ಧ್ವನಿಯಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಇಂಪಾದ ಸಂಗೀತ ಹಾಗೂ ಮನಸ್ಸಿಗೆ ಮುದ ನೀಡುವ ಲೊಕೇಶನ್ನಲ್ಲಿರುವ ಕಣ್ಮಣಿ ಕಿಚ್ಚನ ಅಭಿಮಾನಿಗಳಿಗೆ ಸಖತ್ ಇಷ್ಟವಾಗುತ್ತಿದೆ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಈ ಸಾಂಗ್ ಬಿಡುಗಡೆಯಾಗಿದೆ.
- " class="align-text-top noRightClick twitterSection" data="">
ಈಗಾಗಲೇ ಶೂಟಿಂಗ್ ಮುಗಿಸಿಕೊಂಡಿರುವ ಪೈಲ್ವಾನ್ ಆಗಸ್ಟ್ನಲ್ಲಿ ಬಿಡುಗಡೆಯಾಗುತ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಬಾಲಿವುಡ್ ನಟ ಸುನೀಲ್ ಶೆಟ್ಟಿ, ಕಬೀರ್ ದುಹಾನ್ ಸಿಂಗ್, ಆಕಾಂಕ್ಷಾ ಸಿಂಗ್ ನಟಿಸಿರುವ ಈ ಚಿತ್ರಕ್ಕೆ ಹೆಬ್ಬುಲಿ ಖ್ಯಾತಿಯ ಕೃಷ್ಣಪ್ಪ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.