'ತಾಯಿಗೆ ತಕ್ಕ ಮಗ' ಸಿನಿಮಾ ನಂತರ ಸ್ಯಾಂಡಲ್ವುಡ್ ಕೃಷ್ಣ ಎನಿಸಿಕೊಂಡಿರುವ ಅಜಯ್ ರಾವ್ ಅಭಿನಯದ ಯಾವುದೇ ಸಿನಿಮಾ ಬಿಡುಗಡೆಯಾಗಲಿಲ್ಲ. ಇದೀಕ ಕೃಷ್ಣ ಅಭಿನಯದ ಹೊಸ ಸಿನಿಮಾ ಬಿಡುಗಡೆಗೆ ಸಿದ್ಧವಿದೆ. ನಿನ್ನೆಯಷ್ಟೇ 'ಕೃಷ್ಣ ಟಾಕೀಸ್' ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಟ್ರೇಲರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
- " class="align-text-top noRightClick twitterSection" data="">
ಇದೇ ಮೊದಲ ಬಾರಿ ಅಜಯ್ ರಾವ್ ಸಸ್ಪೆನ್ಸ್ ಹಾಗು ಥ್ರಿಲ್ಲರ್ ಜಾನರ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಅಜಯ್ ರಾವ್ ಪತ್ರಕರ್ತನ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯಕ್ಕೆ ಬಿಡುಗಡೆ ಆಗಿರುವ ಟ್ರೇಲರ್ನಲ್ಲಿ ಕೆಲವೊಂದು ಹಾರರ್ ದೃಶ್ಯಗಳನ್ನು ನೋಡಬಹುದು. ಈ ಹಿಂದೆ 'ಓಳ್ ಸ್ವಾಮಿ' ಎಂಬ ಸಿನಿಮಾ ನಿರ್ದೇಶನ ಮಾಡಿ ಭರವಸೆ ಮೂಡಿಸಿದ್ದ ನಿರ್ದೇಶಕ ವಿಜಯಾನಂದ್ 'ಕೃಷ್ಣ ಟಾಕೀಸ್' ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅಜಯ್ ರಾವ್ ಜೋಡಿಯಾಗಿ ಅಪೂರ್ವ ರೊಮ್ಯಾನ್ಸ್ ಮಾಡಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ಸಿಂಧು ಲೋಕನಾಥ್ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರಗಿ ವಿರುದ್ಧ ಸಿಡಿದೆದ್ದ ಸಹ ಸ್ಪರ್ಧಿಗಳು
'ಕೃಷ್ಣ ಟಾಕೀಸ್' ಚಿತ್ರಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತ ನಿರ್ದೇಶನವಿದೆ. ಅಭಿಷೇಕ್ ಜಿ. ಕಾಸರಗೋಡು ಡಿಒಪಿ ಆಗಿ ಕೆಲಸ ಮಾಡಿದ್ದಾರೆ. ಗೋವಿಂದರಾಜ್ ಆಲೂರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಏಪ್ರಿಲ್ 9 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಸಿನಿಮಾವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸಲಿದ್ದಾರೆ ಕಾದು ನೋಡಬೇಕು.