ETV Bharat / sitara

ಮಾತಿನ ಮನೆಯಲ್ಲಿರುವ 'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರ - Vinayaka kodsara direction film

ವಿನಾಯಕ ಕೋಡ್ಸರ ನಿರ್ದೇಶನದ 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಸಿನಿಮಾ ಚಿತ್ರೀಕರಣ ಮುಗಿಸಿ ಡಬ್ಬಿಂಗ್ ಹಂತದಲ್ಲಿದೆ. ಸದ್ಯಕ್ಕೆ ಹಿರಿಯ ನಟಿ ಉಮಾಶ್ರೀ ಮಾತಿನ ಜೋಡಣೆಯಲ್ಲಿ ಬ್ಯುಸಿ ಇದ್ದು ಈ ಫೋಟೋಗಳು ರಿವೀಲ್ ಆಗಿವೆ.

Kshamisi nimma Khateyalli Hanavilla
'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ'
author img

By

Published : Feb 16, 2021, 12:17 PM IST

ದಿಗಂತ್ ಹಾಗೂ ಐಂದ್ರಿತಾ ರೇ ಬಹಳ ದಿನಗಳ ಬಳಿಕ ಒಟ್ಟಿಗೆ ನಟಿಸುತ್ತಿರುವ ಸಿನಿಮಾ 'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಬಹುತೇಕ ಚಿತ್ರೀಕರಣ ಮುಗಿಸಿ ಡಬ್ಬಿಂಗ್ ಹಂತದಲ್ಲಿದೆ. ಕಲಾವಿದರು ತಾವು ಅಭಿನಯಿಸಿರುವ ದೃಶ್ಯಗಳಿಗೆ ಡಬ್ಬಿಂಗ್ ಮಾಡುತ್ತಿದ್ದಾರೆ. ಉಮಾಶ್ರೀ ಕೂಡಾ ಇದೀಗ ಮಾತಿನ ಜೋಡಣೆ ಕಾರ್ಯದಲ್ಲಿ ಬ್ಯುಸಿ ಇದ್ದಾರೆ.

Kshamisi nimma Khateyalli Hanavilla
'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರಕ್ಕೆ ಉಮಾಶ್ರೀ ಡಬ್ಬಿಂಗ್

ಬೆಂಗಳೂರಿನ ಸ್ಟುಡಿಯೋವೊಂದರಲ್ಲಿ ಉಮಾಶ್ರಿ ಡಬ್ಬಿಂಗ್ ಕಾರ್ಯದಲ್ಲಿ ನಿರತರಾಗಿದ್ದು ಈ ಫೋಟೋಗಳು ರಿವೀಲ್ ಆಗಿದೆ. ಚಿತ್ರರಂಗದ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿರುವ ಅನುಭವ ಇರುವ ವಿನಾಯಕ ಕೋಡ್ಸರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.‌ ಕಿರು ಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ವಿನಾಯಕ ಕೋಡ್ಸರ ಅವರಿಗೆ ಹಿರಿತೆರೆಯಲ್ಲಿ ಇದು ಚೊಚ್ಚಲ ನಿರ್ದೇಶನದ ಚಿತ್ರ. ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ‌ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. ರವೀಂದ್ರ ಜೋಶಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ನಂದ ಕಿಶೋರ್ ಎನ್​​​​. ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಅವರ ಸಂಕಲನವಿರುವ ಈ‌ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಮ್​​​ ರಚಿಸಿದ್ದಾರೆ. ವೇಣು ಹಸ್ರಾಳಿ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

Kshamisi nimma Khateyalli Hanavilla
ಮಾತಿನ ಜೋಡಣೆಯಲ್ಲಿ ಉಮಾಶ್ರೀ

ಇದನ್ನೂ ಓದಿ: ಕಾಮನ್ ಡಿಪಿ ಮೂಲಕ ಸಾರಥಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಅಭಿಮಾನಿಗಳು

'ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರೀಕರಣ ಸಂಪೂರ್ಣವಾಗಿದ್ದು ಸಾಗರ, ಸಿಗಂದೂರು, ಬೆಂಗಳೂರು ಹಾಗೂ ಇನ್ನಿತರ ಕಡೆಗಳಲ್ಲಿ ಚಿತ್ರೀಕರಣ ಜರುಗಿದೆ. ಉಪ್ಪಿ ಎಂಟರ್ಟೈನರ್​​​​​​​​​​​​​​​​​​​​​​​​​​​​​​​​ ಲಾಂಛನದಲ್ಲಿ ಸಿಲ್ಕ್ ಮಂಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸಂಪೂರ್ಣ ಹಾಸ್ಯಮಯ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ದಿಗಂತ್ ಐಂದ್ರಿತಾ ರೇ, ಹಿರಿಯ ನಟಿ‌ ಉಮಾಶ್ರೀ, ರಂಜನಿ ರಾಘವನ್, ಕಾಸರಗೋಡು ಚಿನ್ನ, ಪಿ.ಡಿ.ಸತೀಶ್‌ ಹಾಗೂ ನೀನಾಸಂನ ಹಲವು ಕಲಾವಿದರು ‌ನಟಿಸಿದ್ದಾರೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.