ಉದಯ ಪ್ರಸನ್ನ ನಿರ್ದೇಶನದ 'ಮಹಿಷಾಸುರ' ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. ಚಿತ್ರವನ್ನು ತಮಿಳಿನ 'ಅಸುರನ್' ಚಿತ್ರಕ್ಕೆ ಹೋಲಿಸಿರುವುದು ಚಿತ್ರತಂಡ ಮತ್ತು ನಿರ್ದೇಶಕರ ಶ್ರಮಕ್ಕೆ ಸಿಕ್ಕ ಉತ್ತಮ ಪ್ರತಿಕ್ರಿಯೆಯಾಗಿದೆ.
ಕೊರೊನಾದಿಂದಾಗಿ ಸಿನಿಮಾ ಬಿಡುಗಡೆ ತಡವಾಗುತ್ತಿದ್ದು ಇದೇ ತಿಂಗಳ 15 ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಚಿತ್ರಮಂದಿರಗಳು ಓಪನ್ ಆಗುತ್ತಿದ್ದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಮಹಿಷಾಸುರ ಆರ್ಭಟಿಸಲಿದ್ದಾನೆ. ಅರ್ಜುನ್, ಬಿಂದುಶ್ರೀ, ಮಂಜು ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ. ಮೈತ್ರಿ ಪ್ರೊಡಕ್ಷನ್ಸ್ ಬ್ಯಾನರ್ ಹಾಗೂ ಮೇಳೆಕೋಟೆ ಟೂರಿಂಗ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ತಯಾರಾಗಿದೆ.
ಮೇಳೆಕೋಟೆ ಟೂರಿಂಗ್ ಟಾಕೀಸ್ ಬ್ಯಾನರ್ನಲ್ಲಿ ನಿರ್ದೇಶಕ ಉದಯ ಪ್ರಸನ್ನ 'ಬೆಣ್ಣೆ ಗುಲ್ಕನ್' ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಚಿತ್ರತಂಡ ಕಲಾವಿದರ ಆಯ್ಕೆಯಲ್ಲಿ ತೊಡಗಿದೆ. ಈ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಚಿತ್ರತಂಡ ಆತ್ಮವಿಶ್ವಾಸ ವ್ಯಕ್ತಪಡಿಸಿದೆ.