ವೈಟ್ ಪ್ಯಾಂಥರ್ಸ್ ಕ್ರಿಯೇಟಿವ್ ಸಂಸ್ಥೆ ನಿರ್ಮಾಣದಲ್ಲಿ ಕೋಡ್ಲು ರಾಮಕೃಷ್ಣ ನಿರ್ದೇಶಿಸುತ್ತಿರುವ 'ಮತ್ತೆ ಉದ್ಭವ' ಸಿನಿಮಾ ಮೊದಲನೇ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿರುವುದಾಗಿ ಚಿತ್ರತಂಡ ತಿಳಿಸಿದೆ.
ಬೆಂಗಳೂರಿನ ವಿವಿಧ ಲೊಕೇಶನ್ಗಳಲ್ಲಿ ಚಿತ್ರವನ್ನು ಚಿತ್ರೀಕರಿಸಿಸಲಾಗಿದೆ. ಎರಡನೇ ಹಂತದ ಚಿತ್ರೀಕರಣವನ್ನು ಜುಲೈ ಮೊದಲ ವಾರದಲ್ಲಿ ಪಾರಂಭಿಸಲಾಗುವುದು. 'ಪ್ರೀಮಿಯರ್ ಪದ್ಮಿನಿ' ಚಿತ್ರದಲ್ಲಿ ಜಗ್ಗೇಶ್ ಕಾರ್ ಡ್ರೈವರ್ ನಂಜುಂಡಿ ಪಾತ್ರ ಮಾಡಿದ್ದ ಪ್ರಮೋದ್ ಈ ಸಿನಿಮಾದಲ್ಲಿ ನಾಯಕರಾಗಿ ನಟಿಸಿದ್ದಾರೆ. ಮಿಲನ ನಾಗರಾಜ್ ನಾಯಕಿಯಾಗಿ ನಟಿಸಿದ್ದು, ಇವರೊಂದಿಗೆ ಅವಿನಾಶ್, ರಂಗಾಯಣ ರಘು, ಮೋಹನ್, ಸುಧಾ ಬೆಳವಾಡಿ, ಶುಭ ರಕ್ಷಾ, ಮಂಡ್ಯ ರವಿ, ಪಿ.ಡಿ.ಸತೀಶ್ ಚಂದ್ರ ಹಾಗೂ ಇನ್ನಿತರರು ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಹಾಡುಗಳಿಗೆ ವಿ.ಮನೋಹರ್ ಸಂಗೀತ್ ನೀಡಿದ್ದಾರೆ.