ETV Bharat / sitara

ಗಣೇಶ್ ಜೊತೆ ಮೇಘ ಶೆಟ್ಟಿ 'ತ್ರಿಬಲ್ ರೈಡಿಂಗ್' ಹೋಗೋದು ಕನ್ಫರ್ಮ್ - Megha shetty triple riding movie

ಕಿರುತೆರೆ ನಟಿ ಮೇಘ ಶೆಟ್ಟಿ ಬೆಳ್ಳಿ ತೆರೆಗೆ ಕೂಡಾ ಎಂಟ್ರಿ ಕೊಟ್ಟಿದ್ದು ಗಣೇಶ್ ಜೊತೆ 'ತ್ರಿಬಲ್ ರೈಡಿಂಗ್' ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರವನ್ನು ಮಹೇಶ್ ಗೌಡ ನಿರ್ದೇಶಿಸುತ್ತಿದ್ದು ಚಿತ್ರದ ಮೂವರು ನಾಯಕಿಯರಲ್ಲಿ ಮೇಘ ಕೂಡಾ ಒಬ್ಬರು ಎನ್ನಲಾಗಿದೆ.

Megha shetty act with Ganesh
'ತ್ರಿಬಲ್ ರೈಡಿಂಗ್'
author img

By

Published : Sep 30, 2020, 2:41 PM IST

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಜೊತೆಜೊತೆಯಲಿ' ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರದಲ್ಲಿ ನಟಿಸುತ್ತಿರುವ ಮೇಘ ಶೆಟ್ಟಿ ಸಿನಿಮಾದಲ್ಲಿ ನಟಿಸುವುದು ಖಚಿತವಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ತ್ರಿಬಲ್ ರೈಡಿಂಗ್' ಚಿತ್ರದ ಮೂವರು ನಾಯಕಿಯರಲ್ಲಿ ಮೇಘ ಶೆಟ್ಟಿ ಕೂಡಾ ಒಬ್ಬರು ಎನ್ನಲಾಗಿದೆ.

ಗಣೇಶ್ ಅವರೊಂದಿಗೆ ನಟಿಸಲು ಬಹಳ ಎಕ್ಸೈಟ್ ಆಗಿದ್ದೇನೆ ಎನ್ನುತ್ತಾರೆ ಮೇಘ. ಇದೊಂದು ಲವ್, ಥ್ರಿಲ್ಲರ್ ಸ್ಟೋರಿ ಆಗಿದ್ದು ಪ್ರೇಕ್ಷಕರಿಗೆ ಮನರಂಜನೆ ನೀಡುವುದು ಗ್ಯಾರಂಟಿ ಎಂದು ಚಿತ್ರತಂಡ ಹೇಳಿದೆ. ಇದು ಮೇಘಶೆಟ್ಟಿ ಅಭಿನಯದ ಮೊದಲ ಸಿನಿಮಾ. ಚಿತ್ರದಲ್ಲಿ ಮೂವರು ನಾಯಕಿಯರಲ್ಲಿ ಮೇಘ ಹೋಮ್ಲಿ ಗರ್ಲ್​ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ನಿರ್ದೇಶಕ ಮಹೇಶ್ ಗೌಡ ಹೇಳಿದ್ದಾರೆ. ಸಂಭಾಷಣೆ ಕೂಡಾ ಮಹೇಶ್ ಗೌಡ ಬರೆದಿದ್ದಾರೆ. ವಿನೋದ್ ಪ್ರಭಾಕರ್ ಅಭಿನಯದ ರಗಡ್ ಸಿನಿಮಾವನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ಮಹೇಶ್ ಗೌಡ ಈಗ 'ತ್ರಿಬಲ್ ರೈಡಿಂಗ್' ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ‌.

Megha shetty act with Ganesh
ಮೇಘ ಶೆಟ್ಟಿ

ಸಾಧು ಕೋಕಿಲ, ರವಿಶಂಕರ್ ಗೌಡ, ಕುರಿ ಪ್ರತಾಪ್, ಖಳನಟ‌ ರವಿಶಂಕರ್, ರಂಗಾಯಣ ರಘು, ಸೇರಿದಂತೆ ಹಲವಾರು ಕಲಾವಿದರು ಚಿತ್ರದಲ್ಲಿ ನಟಿಸಲಿದ್ದಾರೆ‌. ಚಿತ್ರಕ್ಕೆ ಸಾಯಿ ಕಾರ್ತಿಕ್ ಸಂಗೀತ ನಿರ್ದೇಶನವಿದ್ದು, ಆನಂದ್ ಈ ಚಿತ್ರಕ್ಕೆ ಕ್ಯಾಮರಾ ವರ್ಕ್ ಮಾಡಲಿದ್ದಾರೆ. ಪ್ರಕಾಶ್ ಸಂಕಲನವಿರುವ ಈ ಚಿತ್ರಕ್ಕೆ ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.

ಜಯಂತ್ ಕಾಯ್ಕಿಣಿ, ವಿ. ನಾಗೇಂದ್ರಪ್ರಸಾದ್, ಚೇತನ್ ಕುಮಾರ್ ಹಾಗೂ ನಿರ್ದೇಶಕ ಮಹೇಶ್ ಗೌಡ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. 'ತ್ರಿಬಲ್ ರೈಡಿಂಗ್' ಟೈಟಲ್​​​ನಿಂದಲೇ ಸ್ಯಾಂಡಲ್​​​​​​​​​​​ವುಡ್ ನಲ್ಲಿ ಸದ್ದು ಮಾಡುತ್ತಿದೆ. ಕೃಪಾಳು ಎಂಟರ್ಟೈನ್ಮೆಂಟ್ ಲಾಂಛನದಲ್ಲಿ, ವೈ.ಎನ್​. ರಾಮ್ ಗೋಪಾಲ್ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಅಕ್ಟೋಬರ್ ಎರಡನೇ ವಾರದಿಂದ ಚಿತ್ರೀಕರಣ ಆರಂಭ ಆಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.