ETV Bharat / sitara

'ಅನಿರೀಕ್ಷಿತ' ನಟನೆ ಜೊತೆಗೆ ನಿರ್ದೇಶಕನಾದ ಹಾಸ್ಯ ನಟ ಮಿಮಿಕ್ರಿ ದಯಾನಂದ್ - Mimicry Dayanand Directed new movie

ಹಾಸ್ಯ ನಟ ಮಿಮಿಕ್ರಿ ದಯಾನಂದ ಇದೀಗ ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ. ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ, ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತವೆ. ಇಂತಹ ತಾತ್ವಿಕವಾದ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ಹೇಗೆ ಎಳೆಎಳೆಯಾಗಿ ರಹಸ್ಯ ಬಿಚ್ಚಿಕೊಳ್ಳುತ್ತ ಸಾಗುತ್ತದೆ ಎಂಬುದನ್ನು ನಿರೂಪಿಸುವುದೇ ಅನಿರೀಕ್ಷಿತ ಚಿತ್ರದ ಕಥಾಹಂದರ.

Anirikshitha Movie
ಅನಿರೀಕ್ಷಿತ ಸಿನೆಮಾ
author img

By

Published : Jun 23, 2021, 5:00 PM IST

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ‌ ಸಿನಿಮಾ ಪ್ರಿಯರನ್ನ ರಂಜಿಸುತ್ತಿರುವ ಹಾಸ್ಯ ನಟ ಮಿಮಿಕ್ರಿ ದಯಾನಂದ್ ಇದೀಗ ಮಿಮಿಕ್ರಿ ಜೊತೆಗೆ ನಿರ್ದೇಶಕರಾಗಿದ್ದಾರೆ. ಹೌದು, ಲಾಕ್​ಡೌನ್​ ಸಮಯವನ್ನ ವ್ಯರ್ಥ ಮಾಡದೇ, ದಯಾನಂದ್​ ಸಿನಿಮಾವೊಂದನ್ನ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅನಿರೀಕ್ಷಿತ ಅಂತಾ ಟೈಟಲ್ ಇಟ್ಟು, ಚೊಚ್ಚಲ ಬಾರಿಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ.

ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ, ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತವೆ. ಇಂತಹ ತಾತ್ವಿಕವಾದ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ಹೇಗೆ ಎಳೆಎಳೆಯಾಗಿ ರಹಸ್ಯ ಬಿಚ್ಚಿಕೊಳ್ಳುತ್ತ ಸಾಗುತ್ತದೆ ಎಂಬುದನ್ನು ನಿರೂಪಿಸುವುದೇ, ಅನಿರೀಕ್ಷಿತ ಚಿತ್ರದ ಕಥಾಹಂದರ.

Mimicry-dayananda
ಅನಿರೀಕ್ಷಿತ ಸಿನೆಮಾ ಪೋಸ್ಟರ್​ ಜೊತೆ ನಿರ್ದೇಶಕ ಮಿಮಿಕ್ರಿ ದಯಾನಂದ್​

13 ಜನ ಪ್ರತಿಭಾವಂತರ ತಂಡದ ಪರಿಶ್ರಮದ ‌ಫಲವಾಗಿ ಈ ಚಿತ್ರ ಮೂಡಿಬಂದಿದೆ. ಕೇವಲ ಎರಡು ಪಾತ್ರಗಳನ್ನಿಟ್ಟುಕೊಂಡು ಒಂದೇ ಚಿತ್ರೀಕರಣ ಸ್ಥಳದಲ್ಲಿ ನಾಲ್ಕು ಲೊಕೇಶನ್​ಗಳಂತೆ ಬಳಸಿರುವುದು ಈ ಚಿತ್ರದ ವಿಶೇಷ. ಚಿತ್ರೀಕರಣ ನಂತರದ ಚಟುವಟಿಕೆಗಳು ಪೂರ್ಣವಾಗಿ ‌ಬಿಡುಗಡೆಗೆ ಸಿದ್ಧವಾಗಿದೆ. ಲಾಕ್ ಡೌನ್ ಪೂರ್ಣವಾಗಿ ಚಿತ್ರಮಂದಿರ ತೆರವಿಗೆ ಅನುಮತಿ ದೊರಕಿದ ಕೂಡಲೇ ಚಿತ್ರಮಂದಿರ ಹಾಗೂ ಓಟಿಟಿ ಫ್ಲಾಟ್ ಫಾರಂನಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಸಿನಿಮಾ ತಂಡ ನಿರ್ಧರಿಸಿದೆ.

Anirikshitha Movie  poster
ಅನಿರೀಕ್ಷಿತ ಸಿನೆಮಾ ಪೋಸ್ಟರ್​

ಅನೀರಿಕ್ಷಿತ ಚಿತ್ರದ ಮೊದಲ ಪೋಸ್ಟರ್​ನ್ನು ನಾಗತಿಹಳ್ಳಿ ಚಂದ್ರಶೇಖರ್ ಅವರು ಬಿಡುಗಡೆ ಮಾಡಿದ್ದಾರೆ. ಎರಡು ಹಾಗೂ ಮೂರನೇ ಪೋಸ್ಟರ್​ನ್ನು ಗಿರಿಜಾ ಲೋಕೇಶ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅನಾವರಣಗೊಳಿಸಿದ್ದಾರೆ. ಸದ್ಯದಲ್ಲೇ ಟ್ರೇಲರ್ ಸಹ ಬಿಡುಗಡೆಯಾಗಲಿದೆ. ಎಸ್.ಕೆ ಟಾಕೀಸ್ ಲಾಂಛನದಲ್ಲಿ ‌ಶಾಂತಕುಮಾರ್‌ ನಿರ್ಮಿಸಿರುವ ಈ‌ ಚಿತ್ರದ ಸಹ ನಿರ್ಮಾಪಕರು ಸಂತೋಷ್ ಕೊಡಂಕೇರಿ, ರಘು ಎಸ್ ಹಾಗೂ ಮಿಮಿಕ್ರಿ ದಯಾನಂದ್.‌

Gurukiran
ಪೋಸ್ಟರ್​ ರಿಲೀಸ್ ಮಾಡಿದ ಸಂಗೀತ ನಿರ್ದೇಶಕ ಗುರುಕಿರಣ್

ಮಿಮಿಕ್ರಿ ದಯಾನಂದ್ ಅವರೇ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆಯನ್ನು ನೆಳ್ಳುಳ್ಳಿ ರಾಜಶೇಖರನ್ ಬರೆದಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ, ಜೀವನ್ ಗೌಡ ಛಾಯಾಗ್ರಹಣ ಹಾಗೂ ರಘು ಅವರ ಸಂಕಲನ ಈ ಚಿತ್ರಕ್ಕಿದೆ.‌ ಚಿತ್ರದಲ್ಲಿ ಕೇವಲ ಎರಡು ಪಾತ್ರಗಳಿದ್ದು,‌ ಮಿಮಿಕ್ರಿ ದಯಾನಂದ್ ಹಾಗೂ ಭಾಮ ಅಭಿನಯಿಸಿದ್ದಾರೆ. ಸಹ ನಿರ್ಮಾಪಕ ಸಂತೋಷ್ ಕೊಡೆಂಕೇರಿ ಈ ಚಿತ್ರದ ತಾಂತ್ರಿಕ ವಿನ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ.

  • " class="align-text-top noRightClick twitterSection" data="">

ETV Bharat Logo

Copyright © 2025 Ushodaya Enterprises Pvt. Ltd., All Rights Reserved.