ಸ್ಯಾಂಡಲ್ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಇದೀಗ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಸದ್ಯ ಪೋಸ್ಟರ್ನಿಂದಲೇ ಭಾರೀ ಸದ್ದು ಮಾಡುತ್ತಿರುವ 'ದಮಯಂತಿ' ಚಿತ್ರವನ್ನು ನೋಡಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.
![mohan lal](https://etvbharatimages.akamaized.net/etvbharat/prod-images/kn-bng-03-radhikakumaraswmaisupportgebandamhonalalu-photos_17102019162016_1710f_1571309416_1001.jpg)
ಚಿತ್ರ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಕೆಲವು ದಿನಗಳ ಹಿಂದೆ ದಮಯಂತಿ ಟ್ರೇಲರ್ ಬಹಳ ಸದ್ದು ಮಾಡಿತ್ತು. ಇದೀಗ ಕನ್ನಡ, ತಮಿಳು, ತೆಲುಗು, ಮಳಯಾಳಂ ಹಾಗೂ ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಇನ್ನು ಈ ಚಿತ್ರಕ್ಕೆ ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ಸಾಥ್ ನೀಡಿದ್ದಾರೆ. ಮೋಹನ್ ಲಾಲ್ 'ದಮಯಂತಿ' ಚಿತ್ರದ ಪೋಸ್ಟರ್ ಅನಾವರಣ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನವೆಂಬರ್ನಲ್ಲಿ ಬಿಡುಗಡೆಯಾಗಲಿರುವ ಮಲಯಾಳಂ ಆಡಿಯೋ ಕಾರ್ಯಕ್ರಮಕ್ಕೆ ಮೋಹನ್ ಲಾಲ್ ಕೂಡಾ ಬರಲಿದ್ದಾರೆ.
![mohan lal](https://etvbharatimages.akamaized.net/etvbharat/prod-images/kn-bng-03-radhikakumaraswmaisupportgebandamhonalalu-photos_17102019162016_1710f_1571309416_853.jpg)
ಚಿತ್ರದ ನಿರ್ದೇಶಕ ನವರಸನ್ ನವೆಂಬರ್ ಅಥವಾ ಡಿಸೆಂಬರ್ನಲ್ಲಿ ಐದು ಭಾಷೆಯಲ್ಲಿ 'ದಮಯಂತಿ' ಚಿತ್ರವನ್ನು ತೆರೆಗೆ ತರುವ ಪ್ಲ್ಯಾನ್ ಮಾಡಿದ್ದಾರೆ. ಇದೊಂದು ಥ್ರಿಲ್ಲರ್ ಎಳೆಯ ಭಯಾನಕ ಕಥೆ ಹೊಂದಿರುವ ಸಿನಿಮಾವಾಗಿದ್ದು, ಚಿತ್ರದಲ್ಲಿ ರಾಧಿಕಾ ಹೊಸ ಅವತಾರದಲ್ಲಿ ದರ್ಶನ ಕೊಟ್ಟಿದ್ದಾರೆ. ಸಾಧು ಕೋಕಿಲ, ತಬಲಾ ನಾಣಿ, ಅನುಷಾ ರೈ ಹಾಗೂ ಇನ್ನಿತರರು ತಾರಾಗಣದಲ್ಲಿದ್ದಾರೆ.