ದೇಶದಲ್ಲಿ ಇದೇ ಮೊದಲ ಬಾರಿಗೆ ಮಡ್ ರೇಸ್ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ಯುವ ನಟ ಯವನ್ ಕೃಷ್ಣ, ರಿಧಾನ್ ಕೃಷ್ಣ, ಅಮಿತ್ ಶಿವದಾಸ್ ಮುಖ್ಯ ಭೂಮಿಕೆಯಲ್ಲಿರುವ ಚಿತ್ರ 'ಮಡ್ಡಿ'. ಇದರ ಜೊತೆಗೆ ಅನುಶಾ ಸುರೇಶ್, ರೆಂಜಿ ಪಣಿಕರ್, ಹರೀಶ್ ಪೆರಾಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ,
ಮ್ಯಾನೇಜ್ಮೆಂಟ್ನಲ್ಲಿ ಪಿ.ಹೆಚ್.ಡಿ ಪದವಿ ಪಡೆದಿರುವ ಡಾ. ಪ್ರಗ್ಬಲ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಚಿತ್ರ ನಿರ್ಮಾಣಕ್ಕೆ ಐದು ವರ್ಷಗಳ ಸಮಯ ಹಿಡಿದಿದ್ದು, ಒಂದು ವರ್ಷ ಲೊಕೇಶನ್ ಹುಡುಕಾಟ ನಡೆಸಿ, ಕೊನೆಗೆ ತಮಿಳುನಾಡು ಹಾಗೂ ಕೇರಳ ಗಡಿ ಪ್ರದೇಶದಲ್ಲಿ ಚಿತ್ರೀಕರಣ ಮಾಡಲಾಗಿದೆ. ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ನಿರ್ಮಾಣವಾಗಿರುವ ಸಿನಿಮಾ ಇದಾಗಿದ್ದು, 'ಕೆಜಿಎಫ್' ಖ್ಯಾತಿಯ ರವಿ ಬಸ್ರೂರ್ ಸಂಗೀತ ನೀಡಿರುವುದು ವಿಶೇಷವಾಗಿದೆ.
ಸಿನಿಮಾ ಬಗ್ಗೆ ಮಾತನಾಡಿರುವ ರವಿ ಬಸ್ರೂರ್, ಸಂಗೀತ ನಿರ್ದೇಶಕ ಹಾಗೂ ಸಂಕಲನಕಾರ ಗಂಡ - ಹೆಂಡತಿ ಇದ್ದಂತೆ. ಅವರಿಬ್ಬರ ನಡುವಿನ ಹೊಂದಾಣಿಕೆ ಮುಖ್ಯ. 'ಮಡ್ಡಿ' ಮೂರು ರಾಜ್ಯಗಳ ಸಿನಿಮಾ ಎನ್ನಬಹುದು, ಏಕೆಂದರೆ ನಾನು ಕರ್ನಾಟಕದವನು, ನಿರ್ದೇಶಕರು ಕೇರಳ ಹಾಗೂ ಸಂಕಲನಕಾರರು ತಮಿಳುನಾಡಿನವರು. ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಮನವಿ ಮಾಡಿದರು.
ಪ್ರೇಮಕೃಷ್ಣ ದಾಸ್ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ನಿರ್ದೇಶಕ ಪ್ರಗ್ಬಲ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ರವಿ ಬಸ್ರೂರ್ ಸಂಗೀತ ನಿರ್ದೇಶನ, ರತೀಶ್ ಛಾಯಾಗ್ರಹಣ, ಸ್ಯಾನ್ ಲೋಕೇಶ್ ಸಂಕಲನ ಹಾಗೂ ರನ್ ರವಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಮಲೆಯಾಳಂ, ತಮಿಳು, ಕನ್ನಡ, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಮೂಡಿಬಂದಿರುವ ಈ ಚಿತ್ರವು ಡಿಸೆಂಬರ್ 10ರಂದು ದೇಶಾದ್ಯಂತ ಸುಮಾರು 400 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.
ಇದನ್ನೂ ಓದಿ: ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ; ವಿಚ್ಛೇದನದ ಬಳಿಕ ನಟಿ ಸಮಂತಾ ಮೊದಲ ಮಾತು