ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್, ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಿಗಿಂತ ಸಮಾಜ ಸೇವೆಯಲ್ಲೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಸದ್ಯ ಕೊಂಚ ಬಿಡುವು ಮಾಡಿಕೊಂಡಿರುವ ಚೇತನ್ ಚಿತ್ರರಂಗದತ್ತ ಮುಖ ಮಾಡಿದ್ದಾರೆ.
ಈಗಾಗಲೇ ಮಾರ್ಗ ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿಯಾಗಿರುವ ನಟ ಚೇತನ್, ಈ ನಡುವೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಸದ್ದಿಲ್ಲದೆ ತಯಾರಾಗುತ್ತಿದ್ದಾರೆ. ನಿರ್ದೇಶಕ ರಾಧಾಕೃಷ್ಣ ಆ್ಯಕ್ಷನ್-ಕಟ್ ಹೇಳಲಿರುವ ಈ ಸಿನಿಮಾದಲ್ಲಿ ಚೇತನ್ ರೈತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೊಂದು ಪಕ್ಕಾ ಲವ್ಸ್ಟೋರಿ ಸಿನಿಮಾ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಭಾಷೆಯಲ್ಲಿ ರಿಲೀಸ್ ಮಾಡಲು ಈಗಾಗಲೇ ಚಿತ್ರತಂಡ ಪ್ಲಾನ್ ಮಾಡಿದೆ.
ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ನಿರ್ದೇಶಕ ರಾಧಾಕೃಷ್ಣ ಅವರು, ಚಿತ್ರ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಮಾರ್ಗ ಚಿತ್ರದ ನಂತರ ಈ ಸಿನಿಮಾದ ಶೂಟಿಂಗ್ ಪ್ರಾರಂಭಿಸುತ್ತೇವೆ. ಕಲಾವಿದರನ್ನು ಹೊರತುಪಡಿಸಿ ಖನನ ಟೀಂ ಮತ್ತೆ ಈ ಚಿತ್ರದಲ್ಲಿ ಒಂದಾಗಿದೆ. ಶೀಘ್ರದಲ್ಲೇ ಚಿತ್ರದ ಟೈಟಲ್ ರಿವೀಲ್ ಮಾಡುವುದಾಗಿ ತಿಳಿಸಿದ್ದಾರೆ.